Dailyhunt Logo
  • Light mode
    Follow system
    Dark mode
    • Play Story
    • App Story
ಕನ್ನಡಕ್ಕೆ ಪ್ರಥಮ ಆದ್ಯತೆ ನೀತಿ ಜಾರಿಗೆ ಒತ್ತು: ಶಿವರಾಜ ತಂಗಡಗಿ

ಕನ್ನಡಕ್ಕೆ ಪ್ರಥಮ ಆದ್ಯತೆ ನೀತಿ ಜಾರಿಗೆ ಒತ್ತು: ಶಿವರಾಜ ತಂಗಡಗಿ

ಕೊಪ್ಪಳ: ಕನ್ನಡ ನಾಡಿನಲ್ಲಿ ಮಾತೃಭಾಷೆ ಕನ್ನಡಕ್ಕೆ ಪ್ರಥಮ ಆದ್ಯತೆ ಎಂಬ ನೀತಿಯನ್ನು ನಮ್ಮ ಸರ್ಕಾರ ಕಟ್ಟುನಿಟ್ಟಾಗಿ ಜಾರಿಗೊಳಿಸಿ, ಇದಕ್ಕೆ ಪೂರಕವಾಗಿ ಎಲ್ಲ‌ ಹಂತಗಳಲ್ಲೂ ಕನ್ನಡದ ಅನುಷ್ಠಾನಕ್ಕೆ ‌ಒತ್ತು ಕೊಡಲಾಗಿದೆ ಎಂದು ಕನ್ನಡ ‌ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದರು.

ಜಿಲ್ಲಾ ‌ಉಸ್ತುವಾರಿ ಸಚಿವರೂ ಆದ ತಂಗಡಗಿ 71ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಇಲ್ಲಿನ ‌ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ರಾಷ್ಟ್ರ ಧ್ವಜಾರೋಹಣ ‌ನೆರವೇರಿಸಿ ಮಾತನಾಡಿ ರಾಜ್ಯದ ಜನ ಈ‌ ನೆಲದ ಭಾಷೆ, ಸಾಹಿತ್ಯ, ಕಲೆ, ಸಂಸ್ಕತಿ ಮತ್ತು ಪರಂಪರೆಯನ್ನು ಸದಾಕಾಲ ಆರಾಧಿಸುವವರು ಎಂದರು.

ಕರ್ನಾಟಕಕ್ಕೆ ಭವ್ಯ ಇತಿಹಾಸವಿದ್ದು ಮೌರ್ಯರು, ಕದಂಬರು, ಗಂಗರು, ಹೊಯ್ಸಳರು, ವಿಜಯನಗರದ ಅರಸರು, ರಾಜಮನೆತನಗಳು ಈ‌ ನಾಡಿಗೆ ನೀಡಿದ ಕೊಡುಗೆ ಅಮೋಘವಾಗಿದೆ. ದಾಸ ಶ್ರೇಷ್ಠ ಕನಕದಾಸರು, ಪುರಂದರದಾಸರು, ಸರ್ವಜ್ಞ, ಶಿಶುನಾಳ ಷರೀಫರಂಥ ಸಂತಕವಿಗಳು ಹಾಗೂ ಸಾಮಾಜಿಕ ಕ್ರಾಂತಿಯ ‌ಹರಿಕಾರ ಜಗಜ್ಯೋತಿ ಬಸವಣ್ಣ ಅವರಂಥ ವಚನಕಾರರು, ದಾರ್ಶನಿಕರು ಬಾಳಿದ ಪುಣ್ಯ ‌ನೆಲವಿದು ಎಂದು ಬಣ್ಣಿಸಿದರು.

ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಪೊಲೀಸ್, ಎನ್.ಸಿ.ಸಿ., ಸ್ಕೌಟ್ ಅಂಡ್ ಗೈಡ್ಸ್ ವತಿಯಿಂದ ನಡೆದ ಪಥಸಂಚಲನ ಗಮನ ಸೆಳೆಯಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಾಹಿಲ್ ಬಾಗ್ಲಾ, ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ್ ನೇಗಿ, ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿಲ್ಲಾ ಉಪ ಅರಣ್ಯ ಸಂರಕ್ಷಣಾ ಅಧಿಕಾರಿ‌ ನಿರ್ಮಲಾ, ಶಾಸಕ ರಾಘವೇಂದ್ರ ಹಿಟ್ನಾಳ, ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಸನ್ನ ಗಡಾದ ಸೇರಿದಂತೆ ಅನೇಕರು ಇದ್ದರು.

Dailyhunt
Disclaimer: This content has not been generated, created or edited by Dailyhunt. Publisher: Prajavani