Dailyhunt Logo
  • Light mode
    Follow system
    Dark mode
    • Play Story
    • App Story
ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಸತ್ಯನಾರಾಯಣ ಅವಧಿ ವಿಸ್ತರಣೆ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಸತ್ಯನಾರಾಯಣ ಅವಧಿ ವಿಸ್ತರಣೆ

ಲಬುರಗಿ: ಜಿಲ್ಲೆಯ ಆಳಂದ ತಾಲ್ಲೂಕಿನ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಟ್ಟು ಸತ್ಯನಾರಾಯಣ ಅವರ ಅವಧಿಯನ್ನು ಒಂದು ವರ್ಷ ವಿಸ್ತರಿಸಿ ಕೇಂದ್ರ ಸರ್ಕಾರದ ಉನ್ನತ ಸಚಿವಾಲಯ ಆದೇಶ ಹೊರಡಿಸಿದೆ.

ಸತ್ಯನಾರಾಯಣ ಅವರ ಅವಧಿ ಇದೇ 25ಕ್ಕೆ ಮುಕ್ತಾಯವಾಗಬೇಕಿತ್ತು.

ಕುಲಪತಿ ಅವರ ಅವಧಿಯನ್ನು ಒಂದು ವರ್ಷಕ್ಕೆ ಅಥವಾ ಮುಂದಿನ ಅವಧಿಯವರೆಗೆ ವಿಸ್ತರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವಾಲಯದ ಅಧೀನ ಕಾರ್ಯದರ್ಶಿ ಶ್ರೇಯಾ ಭಾರದ್ವಾಜ್ ಅವರು ಕುಲಸಚಿವ ಪ್ರೊ.ಆರ್.ಆರ್.ಬಿರಾದಾರ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

'ಕಳೆದ ನಾಲ್ಕು ವರ್ಷಗಳಲ್ಲಿ ಪ್ರೊ. ಬಟ್ಟು ಸತ್ಯನಾರಾಯಣ ಅವರು ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ನೇಮಕಾತಿ, ಹೊಸ ವಿಭಾಗಗಳ ಸ್ಥಾಪನೆ, ಹೊಸ ಕೋರ್ಸ್‌ಗಳ ಪ್ರಾರಂಭ, ಹೊಸ ಶೈಕ್ಷಣಿಕ ಮತ್ತು ಹಾಸ್ಟೆಲ್ ಕಟ್ಟಡಗಳ ನಿರ್ಮಾಣ, ಪ್ರಯೋಗಾಲಯಗಳ ಸ್ಥಾಪನೆ, ಸುಸ್ಥಿರ ಕ್ಯಾಂಪಸ್ ಅಭಿವೃದ್ಧಿ ಉಪಕ್ರಮಗಳು, ತರಬೇತಿ ಮತ್ತು ಉದ್ಯೋಗ ಕೇಂದ್ರ, ಕ್ಯಾಂಪಸ್‍ನಲ್ಲಿ ಅನುಕೂಲಕರ ಶೈಕ್ಷಣಿಕ ವಾತಾವರಣವನ್ನು ಸೃಷ್ಟಿಸಲು ಕ್ರಮ ಕೈಗೊಂಡಿದ್ದಾರೆ' ಎಂದು ಬಿರಾದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Prajavani