ಬೆಂಗಳೂರು: ಕರ್ನಾಟಕದ ದಕ್ಷಿಣಕನ್ನಡ, ಶಿವಮೊಗ್ಗ ಜಿಲ್ಲೆಯಲ್ಲಿ ಆಗಸ್ಟ್ 7ರಂದು ಅತಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಮುಂದಿನ ಎರಡು ದಿನಗಳ ಮಳೆ ಮುನ್ನೆಚ್ಚರಿಕೆ ವರದಿಯನ್ನು ಭಾರತೀಯ ಹವಾಮಾನ ಇಲಾಖೆ ಬಿಡುಗಡೆ ಮಾಡಿದ್ದು, ಮೂರು ಜಿಲ್ಲೆಗಳಲ್ಲಿ 64.5 ಮಿ.ಮೀನಿಂದ 204.4 ಮಿ.ಮೀವರೆಗೂ ಮಳೆಯಾಗುವ ಸಾಧ್ಯತೆಯಿದೆ.
ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇದಲ್ಲದೇ ಆಗಸ್ಟ್ 7ರಂದು ಉತ್ತರ ಕನ್ನಡ, ಕೊಡಗು, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆ 64.5 ಮಿ.ಮೀನಿಂದ 115.4 ಮಿ,ಮೀವರೆಗೆ ಆಗುವ ಸೂಚನೆಯಿದೆ. ಆಗಸ್ಟ್ 8ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿಯೂ ಭಾರಿ ಮಳೆಯಾಗಬಹುದು. ಎರಡು ದಿನಕ್ಕೆ ಈ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಅನ್ನು ಘೋಷಣೆ ಮಾಡಲಾಗಿದೆ.

ಮಳೆ ಮುನ್ನೆಚ್ಚರಿಕೆ

