Dailyhunt Logo
  • Light mode
    Follow system
    Dark mode
    • Play Story
    • App Story
Karnataka Rains: ಕರಾವಳಿ ಜಿಲ್ಲೆಯಲ್ಲಿ ಹೆಚ್ಚು ಮಳೆ, ಯಾವ ಭಾಗದಲ್ಲಿ ಎಷ್ಟು?

Karnataka Rains: ಕರಾವಳಿ ಜಿಲ್ಲೆಯಲ್ಲಿ ಹೆಚ್ಚು ಮಳೆ, ಯಾವ ಭಾಗದಲ್ಲಿ ಎಷ್ಟು?

ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಮಲೆನಾಡಿನ ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಉತ್ತಮ ಮಳೆಯಾಗಿದೆ. ಆದರೆ, ಕಳೆದ ಮೂರ್ನಾಲ್ಕು ದಿನದಿಂದ ಮಳೆ ಪ್ರಮಾಣದಲ್ಲಿ ಕಡಿಮೆಯಾಗಿದೆ.

ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲ್ಲೂಕಿನ ವಿಟ್ಲಪಡನೂರಿನಲ್ಲಿ 99.5 ಮಿ.

ಮೀ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆ ಕಾರವಾರ ತಾಲ್ಲೂಕಿನ ದೇವಲಮಕ್ಕಿಯಲ್ಲಿ 98.5 ಮಿ.ಮೀ, ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಶಿರ್ಲಾಲುವಿ ಹಾಗೂ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಕುಡರೂರಿನಲ್ಲಿ 93 ಮಿ.ಮೀ ಮಳೆಯಾಗಿದೆ.

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಹೊಗಡಹಳ್ಳದಲ್ಲಿ 78.5 ಮಿ.,ಮೀ, ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಯಲ್ಲಿ 78 ಮಿ.ಮೀ ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ಪೆರಾಜೆಯಲ್ಲಿ 72.5 ಮಿ.ಮೀ ಮಳೆಯಾಗಿದೆ.

ಬೆಳಗಾವಿ ಜಿಲ್ಲೆ ಖಾನಾಪುರ ತಾಲ್ಲೂಕಿನ ಪರವಾಡದಲ್ಲಿ 55.5 ಮಿ.ಮೀ, ತುಮಕೂರಿನಲ್ಲಿ 42 ಮಿ.ಮೀ, ಕೋಲಾರ ಜಿಲ್ಲೆ ಮುಳಬಾಗಿಲು ತಾಲ್ಲೂಕಿನ ಧೂಲಪಲ್ಲಿಯಲ್ಲಿ 39 ಮಿ.ಮೀ, ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಹೊನ್ನೇನಹಳ್ಳಿಯಲ್ಲಿ 34 ಮಿ.ಮೀ, ಯಾದಗಿರಿ ತಾಲ್ಲೂಕಿನ ಅರಕೇರಾದಲ್ಲಿ 33 ಮಿ.ಮೀ, ಕಲಬುರಗಿ ಜಿಲ್ಲೆ ಅಫಜಲಪುರ ತಾಲ್ಲೂಕಿನ ಮಲ್ಲಾಬಾದ್ ಹಾಗೂ ಹಾವೇರಿ ಜಿಲ್ಲೆ ಹಾನಗಲ್‌ ತಾಲ್ಲೂಕಿನ ಹಿರೇಕಣಗಿಯಲ್ಲಿ 32 ಮಿ.ಮೀ ಮಳೆಯಾಗಿದೆ.

ಧಾರವಾಡ ಜಿಲ್ಲೆ ಕಲಘಟಗಿಯಲ್ಲಿ 25 ಮಿ. ಮೀ, ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ 18 ಮಿ.ಮೀ, ಬೀದರ್ ಜಿಲ್ಲೆ ಬಸವಕಲ್ಯಾಣ ತಾಲ್ಲೂಕಿನ ಗುಂಡೂರಿನಲ್ಲಿ 17 ಮಿ.ಮೀ, ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಮದರಹಳ್ಳಿಯಲ್ಲಿ 14 ಮಿ.ಮೀ ಮಳೆಯಾಗಿದೆ.

ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಕುಂಚನೂರಿನಿಂದ 12.5 ಮಿ.ಮೀ, ರಾಯಚೂರು ತಾಲ್ಲೂಕಿನ ಸಿಂಗೋಡಿ. ಗದಗ ಜಿಲ್ಲೆ ಗಜೇಂದ್ರ ಗಡ ಹಾಗೂ ಕೊಪ್ಪಳ ಜಿಲ್ಲೆ ಕುಕನೂರು ತಾಲ್ಲೂಕಿನ ಬೇವೂರಿನಲ್ಲಿ ತಲಾ 12 ಮಿ.ಮೀ, ಮೈಸೂರು ಜಿಲ್ಲೆ ಹೆಗ್ಗಡದೇವನಕೋಟೆ ತಾಲ್ಲೂಕಿನ ಡಿಬಿಕುಪ್ಪೆಯಲ್ಲಿ 11.5 ಮಿ.ಮೀ, ಬಳ್ಳಾರಿ ಜಿಲ್ಲೆ ಸಂಡೂರು ತಾಲ್ಲೂಕಿನ ಮೆಟ್ರಿಕಿಯಲ್ಲಿ 11 ಮಿ.ಮೀ ಹಾಗೂ ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಗುಬ್ಬೇವಾಡದಲ್ಲಿ 10.5 ಮಿ.ಮೀ ಮಳೆಯಾಗಿದೆ.

ಬೆಂಗಳೂರು ನಗರದ ದೊಡ್ಡಬನಹಳ್ಳಿಯಲ್ಲಿ 9.5 ಮಿ.ಮೀ, ದಾವಣಗೆರೆ ತಾಲ್ಲೂಕಿನ ಅವರಗೊಳ್ಳದಲ್ಲಿ 9 ಮಿ.ಮೀ, ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕಿನ ಹಾನಗಲ್‌ ನಲ್ಲಿ 6.5 ಮಿ.ಮೀ, ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನಲ್ಲಿ ಕಲ್ಲಿನಾಯಕನಹಳ್ಳಿಯಲ್ಲಿ 5.5 ಮಿ.ಮೀ, ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಧನಗೆರೆಯಲ್ಲಿ 1.5 ಮಿ. ಮೀ ಮಳೆಯಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Prajavani