Dailyhunt Logo
  • Light mode
    Follow system
    Dark mode
    • Play Story
    • App Story
Karnataka Rains: ಮುಂದಿನ 6 ದಿನ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಮುನ್ಸೂಚನೆ

Karnataka Rains: ಮುಂದಿನ 6 ದಿನ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಮುನ್ಸೂಚನೆ

ಮುರುಸು ಚಂಡಮಾರುತದ ಪ್ರಭಾವವೂ ಸೇರಿದಂತೆ ಈ ವಾರದಲ್ಲಿ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆಯಾಗಲಿದೆ. ಉತ್ತರ ಕರ್ನಾಟಕದ ಭಾಗದಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು: ಕರ್ನಾಟಕದಲ್ಲಿ ಮುಂದಿನ ಆರು ದಿನಗಳ ಕಾಲ ಅಲ್ಲಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ, ಮಲೆನಾಡು ಭಾಗ ಮಾತ್ರವಲ್ಲದೇ ಕೋಲಾರ ಸಹಿತ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಬಹುದು ಎಂದು ತಿಳಿಸಲಾಗಿದೆ. ಹೆಚ್ಚಿನ ಕಡೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಿದ್ದರೆ, ಒಂದೆರಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಬಹುದು ಎಂದು ತಿಳಿಸಲಾಗಿದೆ.

ನ. 3, ಮಂಗಳವಾರ

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಸಾಧಾರಣದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ರಾಯಚೂರು, ಯಾದಗಿರಿ ಮತ್ತು ಕೊಪ್ಪಳ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ, ಬಿರುಗಾಳಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬೀಸಲಿದ್ದು. ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಬೀದರ್, ಗದಗ, ಹಾವೇರಿ, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಬಹುತೇಕ ಒಣ ಹವಾಮಾನವಿರಲಿದೆ.

ಮಂಡ್ಯ, ಬೆಂಗಳೂರು ದಕ್ಷಿಣ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಕೊಡಗು, ಮೈಸೂರು, ಚಾಮರಾಜನಗರ,ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯ ಕೆಲವೆಡೆ ತುಂತುರುಮಳೆಯಿಂದ ಸಾಧಾರಣ ಮಳೆಯಾಗಲಿದ್ದು, ಗುಡುಗು ಕೂಡ ಇರಲಿದೆ. ಚಿತ್ರದುರ್ಗ, ದಾವಣಗೆರೆ, ಹಾಸನ, ತುಮಕೂರು ಮತ್ತು ವಿಜಯನಗರ, ಬಳ್ಳಾರಿ, ಚಿಕ್ಕಬಳ್ಳಾಪುರದಲ್ಲಿ ಮುಖ್ಯವಾಗಿ ಒಣಹವೆ ಇರುವ ಸಾಧ್ಯತೆ ಇದೆ.

ನ.4, ಬುಧವಾರ

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಸಾಧಾರಣದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆಯಾಗಲಿದೆ.

ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಬಹುತೇಕ ಒಣ ಹವಾಮಾನವಿರಲಿದೆ.

ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಮತ್ತು ಒಂದು ಅಥವಾ ಎರಡು ಸ್ಥಳಗಳಲ್ಲಿ ಜೋರಾದ ಗಾಳಿಯೊಂದಿಗೆ ಭಾರಿ ಮಳೆ/ಗುಡುಗು ಸಹಿತ ಬೀಳುವ ಸಾಧ್ಯತೆಯಿದೆ

ಬಳ್ಳಾರಿ, ಬೆಂಗಳೂರು (ಗ್ರಾಮೀಣ), ಬೆಂಗಳೂರು (ನಗರ), ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು ಮತ್ತು ವಿಜಯನಗರ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಗಾಳಿಯೊಂದಿಗೆ ತುಂತುರು ಹಾಗೂ ಸಾಧಾರಣ ಮಳೆ ಆಗಬಹುದು

ನ. 5, ಗುರುವಾರ

ಧಾರವಾಡ ಮತ್ತು ಗದಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬಹುತೇಕ ಒಣ ಹವಾಮಾನವಿರುವ ಸಾಧ್ಯತೆಯಿದೆ.

ಕೊಡಗು, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಜೋರಾದ ಗಾಳಿಯೊಂದಿಗೆ (30-40 ಕಿಮೀ) ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ

ಬಳ್ಳಾರಿ, ಬೆಂಗಳೂರು (ಗ್ರಾಮೀಣ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ಬೆಂಗಳೂರು ದಕ್ಷಿಣ, ತುಮಕೂರು, ಶಿವಮೊಗ್ಗ, ವಿಜಯನಗರ ಜಿಲ್ಲೆಯ ಕೆಲವು ಕಡೆ ತುಂತುರುಮಳೆಯಿಂದ ಸಾಧಾರಣ ಮಳೆ ಆಗಲಿದೆ.

ನ. 6, ಶುಕ್ರವಾರ

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಸಾಧಾರಣದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು (ಗ್ರಾಮೀಣ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು ಮತ್ತು ಬೆಂಗಳೂರು ದಕ್ಷಿಣ ಜಿಲ್ಲೆಯ ಕೆಲವೆಡೆ ಕೆಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರು ಮತ್ತು ವಿಜಯನಗರ ಜಿಲ್ಲೆಯಲ್ಲಿ ಒಣ ಹವೆ ಇರಲಿದೆ.

ನ.8, ಭಾನುವಾರ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಹುತೇಕ ಒಣ ಹವಾಮಾನವಿರುವ ಸಾಧ್ಯತೆಯಿದೆ.

ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಕಲಬುರಗಿ, ವಿಜಯಪುರ ಮತ್ತು ಯಾದಗಿರಿ, ಬಾಗಲಕೋಟೆ, ಬೀದರ್, ಬೆಳಗಾವಿಯಲ್ಲಿ ಒಣ ಹವೆ ಹೆಚ್ಚಾಗಲಿದೆ.

ಮೈಸೂರು, ಹಾಸನ, ಚಾಮರಾಜನಗರ, ಕೊಡಗು, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಬೆಂಗಳೂರು (ನಗರ), ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಬೆಂಗಳೂರು ದಕ್ಷಿಣ, ತುಮಕೂರು ಮತ್ತು ವಿಜಯನಗರ, ಬಳ್ಳಾರಿ, ಬೆಂಗಳೂರು (ಗ್ರಾಮೀಣ) ಭಾಗದಲ್ಲಿ ಮುಖ್ಯವಾಗಿ ಒಣ ಹವಾಮಾನವಿರಲಿದೆ.

ನ.9, ಸೋಮವಾರ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣದಿಂದ ಮಧ್ಯಮ ಮಳೆಯಾಗಲಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಹುತೇಕ ಒಣ ಹವಾಮಾನವಿರುವ ಸಾಧ್ಯತೆಯಿದೆ.

ಬೀದರ್, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಒಣ ಹವೆ ಇರಲಿದೆ.

ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮಂಡ್ಯ, ಬೆಂಗಳೂರು ದಕ್ಷಿಣ, ತುಮಕೂರು, ಚಿತ್ರದುರ್ಗ, ವಿಜಯನಗರ, ಬಳ್ಳಾರಿ, ಬೆಂಗಳೂರು (ನಗರ), ಚಿಕ್ಕಬಳ್ಳಾಪುರ, , ದಾವಣಗೆರೆ, ಕೋಲಾರ, ಬೆಂಗಳೂರು (ಗ್ರಾಮೀಣ) ಭಾಗದಲ್ಲಿ ಒಣ ಹವಾಮಾನ ಇರಲಿದೆ.

ನ.7, ಶನಿವಾರ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಹುತೇಕ ಒಣ ಹವಾಮಾನವಿರಲಿದೆ. ಬಾಗಲಕೋಟೆ, ಬೀದರ್, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬಹುತೇಕ ಒಣ ಹವಾಮಾನವಿರುವ ಸಾಧ್ಯತೆಯಿದೆ. ಚಾಮರಾಜನಗರ, ಮೈಸೂರು, ಹಾಸನ, ಕೊಡಗು, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು (ಗ್ರಾಮೀಣ), ಬೆಂಗಳೂರು (ನಗರ), ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಬೆಂಗಳೂರು ದಕ್ಷಿಣ, ತುಮಕೂರು ಮತ್ತು ವಿಜಯನಗರ ಭಾಗದಲ್ಲಿ ಮುಖ್ಯವಾಗಿ ಒಣ ಹವಾಮಾನ ಕಂಡು ಬರಲಿದೆ.ವಾರಾಂತ್ಯ ಹೇಗಿದೆ
Dailyhunt
Disclaimer: This content has not been generated, created or edited by Dailyhunt. Publisher: Prajavani