ಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ.
ಸ್ವಾತಂತ್ರೋತ್ಸವ ದಿನವಾದ ಆಗಸ್ಟ್ 15ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಭಾರತೀಯ ಹವಾಮಾನ ಇಲಾಖೆ ವರದಿ ಆಧರಿಸಿ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರವು ಮಳೆ ಮಾಹಿತಿಯನ್ನು ಬಿಡುಗಡೆ ಮಾಡಿದೆ.
ಉತ್ತರ ಒಳನಾಡಿನ ಬೀದರ್, ಧಾರವಾಡ, ಗದಗ ಮತ್ತು ವಿಜಯಪುರ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಗಂಟೆಗೆ 40-50 ಕಿ.ಮೀ. ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೆಳಗಾವಿ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಗಂಟೆಗೆ 30-40 ಕಿ.ಮೀ. ವೇಗದ ಗಾಳಿಯೊಂದಿಗೆ ಹಗುರ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡು ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಗಂಟೆಗೆ 40-50 ಕಿ.ಮೀ. ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಬೆಂಗಳೂರು ದಕ್ಷಿಣ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಗಂಟೆಗೆ 30-40 ಕಿ.ಮೀ. ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಾಧಾರಣದಿಂದ ಕೂಡಿದ ಹಗುರ ಮಳೆಯಾಗುವ ಸಾಧ್ಯತೆಯಿದೆ. ಗಂಟೆಗೆ 40-50 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.

