Dailyhunt Logo
  • Light mode
    Follow system
    Dark mode
    • Play Story
    • App Story
ಕಟಪಾಡಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸನ್ಮಾನ, ಶೇ 100 ಫಲಿತಾಂಶ

ಕಟಪಾಡಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸನ್ಮಾನ, ಶೇ 100 ಫಲಿತಾಂಶ

ಶಿರ್ವ: ಕಟಪಾಡಿ ಎಸ್.ವಿ.ಕೆ, ಎಸ್.ವಿ.ಎಸ್. ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ 2025-26ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

ಶಾಲಾ ಸಂಚಾಲಕ ಕೆ. ಸತ್ಯೇಂದ್ರ ಪೈ ಮಾತನಾಡಿ, ವಿದ್ಯಾರ್ಥಿಗಳ ಯಶಸ್ಸಿನ ಹಿಂದೆ ಶಿಕ್ಷಕರ ಸಮರ್ಪಿತ ಬೋಧನೆ ಹಾಗೂ ಪೋಷಕರ ನಿರಂತರ ಸಹಕಾರ ಇರುತ್ತದೆ.

ಈ ಶೈಕ್ಷಣಿಕ ವರ್ಷದಲ್ಲಿ ಶಾಲೆಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ದಾಖಲಿಸಿ ಗಮನಾರ್ಹ ಸಾಧನೆ ಮಾಡಿದೆ ಎಂದರು.

ರಾಜ್ಯ ಮಟ್ಟದಲ್ಲಿ ನಾಲ್ಕನೇ ರ‍್ಯಾಂಕ್ ಪಡೆದ ವಿದ್ಯಾರ್ಥಿ ಶ್ರೀವತ್ಸ ಕುಳಮರ್ವನನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಅತ್ಯುತ್ತಮ ಅಂಕ ಪಡೆದ ಎಲ್ಲ ವಿದ್ಯಾರ್ಥಿಗಳನ್ನು ಅವರ ಪೋಷಕರ ಸಮೇತ ಗೌರವಿಸಿ ಶುಭ ಹಾರೈಸಲಾಯಿತು. ಶೈಕ್ಷಣಿಕ ಸಲಹೆಗಾರ ದೇವೇಂದ್ರ ನಾಯಕ್, ಮುಖ್ಯ ಶಿಕ್ಷಕಿ ಸುಜಾ ಡಿಸೋಜ, ಆಡಳಿತ ಮಂಡಳಿ ಸದಸ್ಯರಾದ ಬಿ. ಚಂದ್ರಕಾಂತ್ ಪೈ, ಶ್ರೀನಿವಾಸ ಕಿಣಿ, ಗಣೇಶ್ ಕಿಣಿ, ವೆಂಕಟರಮಣ ಭಟ್, ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷ ರಾಘವೇಂದ್ರ ಆಚಾರ್ಯ, ಶ್ವೇತಾ ಶೆಟ್ಟಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260704-28-1746262363

Dailyhunt
Disclaimer: This content has not been generated, created or edited by Dailyhunt. Publisher: Prajavani