ಕೆಜಿಎಫ್: ರಾಬರ್ಟಸನ್‌ಪೇಟೆಯ ಹುಲ್ಲು ಮಾರುಕಟ್ಟೆ ತೆರವು ಕಾನೂನು ಬಾಹಿರ. ಈ ಸಂಬಂಧವಾಗಿ ಬಿಜೆಪಿ ವತಿಯಿಂದ ಕಾನೂನು ಹೋರಾಟ ನಡೆಸಲಾಗುವುದು ಎಂದು ಬಿಜೆಪಿ ಮುಖಂಡರು ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಭಾನುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ವೈ.ಸಂಪಂಗಿ ಮಾತನಾಡಿ, 'ನಗರದಲ್ಲಿರುವ ಎಂ.ಜಿ.ಮಾರುಕಟ್ಟೆಯಲ್ಲಿ ಈಗಾಗಲೇ 900 ಕ್ಕೂ ಹೆಚ್ಚು ಅಂಗಡಿಗಳು ಖಾಲಿ ಇವೆ.
ಈಗ ಅದರ ಪಕ್ಕದಲ್ಲಿ ಮತ್ತೊಂದು ವಾಣಿಜ್ಯ ಸಂಕೀರ್ಣ ಕಟ್ಟಲು ತಯಾರಿ ನಡೆದಿದೆ. ನಗರಸಭೆಯಿಂದ ಎಚ್‌ಡಿಎಫ್‌ಸಿ ಬ್ಯಾಂಕಿನಲ್ಲಿ ಶೇ.11ರಷ್ಟು ಬಡ್ಡಿಗೆ ಸಾಲ ತೆಗೆದುಕೊಳ್ಳಲಾಗಿದೆ. ನ್ಯಾಷನಲ್ ಬ್ಯಾಂಕ್ ಬಿಟ್ಟು ಬೇರೆ ಬ್ಯಾಂಕ್‌ಗಳಲ್ಲಿ ಸಾಲ ತೆಗೆದುಕೊಳ್ಳಬಾರದು ಎಂಬ ಆದೇಶವಿದ್ದರೂ ಉಲ್ಲಂಘನೆ ಮಾಡಲಾಗಿದೆ' ಎಂದು ದೂರಿದರು.
ಗ್ರಾಮೀಣ ಭಾಗದಲ್ಲಿ ನಡೆದಿದ್ದ ಭೂ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ತಹಶೀಲ್ದಾರ್ ಅವರಿಗೆ ಮನವಿ ನೀಡಿದ ಮೂರು ದಿನಕ್ಕೆ ಅವರನ್ನು ವರ್ಗಾವಣೆ ಮಾಡಲಾಗಿದೆ. ತಾಲ್ಲೂಕಿನಲ್ಲಿ ನಡೆಯುತ್ತಿರುವ ಅವ್ಯವಹಾರಗಳನ್ನು ನೋಡಿಕೊಂಡು ಸುಮ್ಮನಿರಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ಬಿಜೆಪಿ ಹಂತ ಹಂತವಾಗಿ ಹೋರಾಟ ನಡೆಸಲಿದೆ ಎಂದು ಹೇಳಿದರು.
ಸುರೇಶ್, ರವಿ, ಪಾಂಡ್ಯನ್, ಬಾಬ್ಬಿ ಇದ್ದರು.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260706-18-1949327304

