Dailyhunt Logo
  • Light mode
    Follow system
    Dark mode
    • Play Story
    • App Story
ಕೆಂಭಾವಿ ಪುರಸಭೆ ಅಧ್ಯಕ್ಷೆ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಅಧಿಕೃತ ಚಾಲನೆ

ಕೆಂಭಾವಿ ಪುರಸಭೆ ಅಧ್ಯಕ್ಷೆ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಅಧಿಕೃತ ಚಾಲನೆ

ಕೆಂಭಾವಿ: ಕೆಂಭಾವಿ ಪುರಸಭೆ ಅಧ್ಯಕ್ಷೆ ಪ್ರಿಯಾ ರಾಮನಗೌಡ ಅವರ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಇದೀಗ ಅಧಿಕೃತ ಚಾಲನೆ ದೊರೆತಿದೆ. ಯಾದಗಿರಿ ಉಪ ವಿಭಾಗಾಧಿಕಾರಿ ವಿಶೇಷ ಸಭೆ ಕರೆಯುವಂತೆ ನೋಟಿಸ್ ಜಾರಿಗೊಳಿಸಿದ್ದಾರೆ.

ಜುಲೈ 13ರಂದು ಮಧ್ಯಾಹ್ನ 12 ಗಂಟೆಗೆ ಕೆಂಭಾವಿ ಪುರಸಭೆ ಸಭಾಂಗಣದಲ್ಲಿ ವಿಶೇಷ ಸಭೆ ನಡೆಯಲಿದ್ದು, ಸಭೆಯಲ್ಲಿ ಅಧ್ಯಕ್ಷೆ ವಿರುದ್ಧದ ಅವಿಶ್ವಾಸ ನಿರ್ಣಯದ ಕುರಿತು ಸದಸ್ಯರ ಅಭಿಪ್ರಾಯ ಪಡೆದು ಮತದಾನ ನಡೆಸಲಾಗುತ್ತದೆ.

ಕೆಂಭಾವಿ ಪುರಸಭೆಯ 23 ಸದಸ್ಯರ ಪೈಕಿ 16 ಜನ ಸದಸ್ಯರು ಅಧ್ಯಕ್ಷೆ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವಂತೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದರು.

ಅಧ್ಯಕ್ಷ ಸ್ಥಾನ ಹಂಚಿಕೆ ಕುರಿತ ಒಳಒಪ್ಪಂದ, ರಾಜೀನಾಮೆ ಸಲ್ಲಿಸಿ ಬಳಿಕ ಅದನ್ನು ಹಿಂಪಡೆದ ಬೆಳವಣಿಗೆ ಹಾಗೂ ಅದರ ಬೆನ್ನಲ್ಲೇ ಅವಿಶ್ವಾಸ ನಿರ್ಣಯದ ಹಾದಿ ಹಿಡಿದಿರುವುದು ಕಾಂಗ್ರೆಸ್ ಪಾಳಯದಲ್ಲೇ ರಾಜಕೀಯ ಚರ್ಚೆಗೆ ಕಾರಣವಾಗಿದೆ. ವಿಶೇಷ ಸಭೆಯಲ್ಲಿ ಸದಸ್ಯರು ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂಬುದರ ಮೇಲೆ ಅಧ್ಯಕ್ಷೆ ಪ್ರಿಯಾ ರಾಮನಗೌಡ ಅವರ ರಾಜಕೀಯ ಭವಿಷ್ಯ ನಿರ್ಧಾರವಾಗಲಿದ್ದು, ಕೆಂಭಾವಿ ಪುರಸಭೆಯ ಮುಂದಿನ ಆಡಳಿತದ ದಿಕ್ಕು ಕೂಡ ಸ್ಪಷ್ಟವಾಗಲಿದೆ. ಈ ಸಭೆಯ ಫಲಿತಾಂಶದತ್ತ ಕೆಂಭಾವಿ ಮಾತ್ರವಲ್ಲದೆ ಯಾದಗಿರಿ ಜಿಲ್ಲೆಯ ರಾಜಕೀಯ ವಲಯದ ಗಮನ ನೆಟ್ಟಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260704-30-1243556381

Dailyhunt
Disclaimer: This content has not been generated, created or edited by Dailyhunt. Publisher: Prajavani