ಕೆಂಭಾವಿ: ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥ ಗ್ರಾಮೀಣಾಭಿವೃದ್ಧಿ ಸಂಸ್ಥೆಯು ಅನೇಕ ಸಾಮಾಜಿಕ ಕಾರ್ಯಕ್ರಮ ಮಾಡುತ್ತ ಬಂದಿದೆ. ಬರೀ ಸಾಲ ಕೊಡುವುದರ ಜೊತೆಗೆ ಕಲ್ಯಾಣ ಮಂಟಪ ಅಭಿವೃದ್ಧಿ, ಸ್ಮಶಾನ ಅಭಿವೃದ್ಧಿ, ಬಡವರಿಗೆ ಸೂರು, ಉಚಿತ ಶಾಸ್ತ್ರ ಚಿಕಿತ್ಸೆ ಹೀಗೆ ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡಲಾತ್ತಿದೆ' ಎಂದು ತಾಲ್ಲೂಕು ಯೋಜನಾಧಿಕಾರಿ ನಾಗೇಶ್ ಎನ್.ಪಿ.
ಹೇಳಿದರು.
ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಆರೋಗ್ಯ ಉಚಿತ ತಪಾಸಣಾ ಶಿಬಿರದಲ್ಲಿ ಅವರು ಮಾತನಾಡಿದರು.
ಹಿರಿಯ ಪತ್ರಕರ್ತ ಸಂಜೀವರಾವ ಕುಲಕರ್ಣಿ ಮಾತನಾಡಿದರು. ಸರ್ಕಾರಿ ಪದವಿಪೂರ್ವ ಕಾಲೇಜು ಸುಧಾರಣಾ ಸಮಿತಿ ಉಪಾಧ್ಯಕ್ಷ ಗುಂಡು ಭಟ್ಟ ಜೋಶಿ ಕಾರ್ಯಕ್ರಮ ಉದ್ಘಾಟಿಸಿದರು.
ಆಡಳಿತ ವೈದ್ಯಾಧಿಕಾರಿ ಡಾ. ಗಿರೀಶ್ ಕುಲಕರ್ಣಿ, ವೀರೇಶ್ ಭಜಂತ್ರಿ, ವಲಯದ ಮೇಲ್ವಿಚಾರಕಿ ಮಹಾದೇವಿ ಸರ್ಜಾಪುರ, ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ಅನಿತಾ ಇದ್ದರು. ಶಿಬಿರದಲ್ಲಿ ರಕ್ತದೊತ್ತಡ, ಕಣ್ಣಿನ ತಪಾಸಣೆ ಜೊತೆಗೆ ಇಸಿಜಿ ಮಾಡಲಾಯಿತು.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260704-30-1242232008

