ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು 2026-27ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ.
ಭೌಗೋಳಿಕ ರಾಜಕೀಯ ಅನಿಶ್ಚಿತತೆ, ಬಂಡವಾಳದ ಹೊರ ಹರಿವು, ಅಮೆರಿಕದ ಸುಂಕ ಹೇರಿಕೆಯಿಂದ ಭಾರತದ ಅರ್ಥ ವ್ಯವಸ್ಥೆಯ ಮೇಲೆ ಪರಿಣಾಮ ಬೀರದಂತೆ ಆರ್ಥಿಕ ಸ್ಥಿರತೆ ಮತ್ತು ಅಭಿವೃದ್ಧಿ ಮಧ್ಯೆ ಸಮನ್ವಯ ಕಾಯ್ದುಕೊಳ್ಳುವ ಉಪಕ್ರಮಗಳನ್ನು ನಿರ್ಮಲಾ ಸೀತಾರಾಮನ್ 2026-27ನೇ ಸಾಲಿನ ಬಜೆಟ್‌ನಲ್ಲಿ ಪ್ರಕಟಿಸುವ ಸಾಧ್ಯತೆಗಳಿವೆ.
ಸವಾಲುಗಳೇನು?
*ತೆರಿಗೆ ಕಡಿತವು ಸರ್ಕಾರದ ಆದಾಯಕ್ಕೆ ಹೊಡೆತ ನೀಡುವುದರಿಂದ ಈ ಆಯ್ಕೆಯನ್ನು ಕೆಲವು ಕ್ಷೇತ್ರಗಳಿಗೆ ಮಾತ್ರ ಸೀಮಿತಗೊಳಿಸಬಹುದು
* ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ಸ್ಥಿರಗೊಳ್ಳದ ಹೊರತು ಹೂಡಿಕೆದಾರರ ವಿಶ್ವಾಸವನ್ನು ಶೀಘ್ರವಾಗಿ ಮರುಸ್ಥಾಪಿಸುವುದು ಕಷ್ಟ
* ಡಾಲರ್ ಎದುರು ರೂಪಾಯಿ ವಿನಿಮಯ ಮೌಲ್ಯ ಕುಸಿಯುತ್ತಿರುವುದರಿಂದ ವಿದೇಶಿ ಹೂಡಿಕೆದಾರಿಂದ ಷೇರುಗಳ ಮಾರಾಟ ಹೆಚ್ಚಿದೆ.
ಇಂದು ಕೇಂದ್ರ ಬಜೆಟ್: ಆರ್ಥಿಕ ಸ್ಥಿರತೆ, ಅಭಿವೃದ್ಧಿ ಸಮನ್ವಯಕ್ಕೆ ಯತ್ನ?
