Dailyhunt Logo
  • Light mode
    Follow system
    Dark mode
    • Play Story
    • App Story
ಖಮೇನಿ ಹತ್ಯೆ ಬೆನ್ನಲ್ಲೇ ಕಾಶ್ಮೀರ ಸೇರಿ ಹಲವು ಕಡೆಗಳಲ್ಲಿ ಭುಗಿಲೆದ್ದ ಪ್ರತಿಭಟನೆ

ಖಮೇನಿ ಹತ್ಯೆ ಬೆನ್ನಲ್ಲೇ ಕಾಶ್ಮೀರ ಸೇರಿ ಹಲವು ಕಡೆಗಳಲ್ಲಿ ಭುಗಿಲೆದ್ದ ಪ್ರತಿಭಟನೆ

ಕ್ವಿಟೊ: ಅಮೆರಿಕ ಹಾಗೂ ಇಸ್ರೇಲ್‌ ಜಂಟಿ ಕಾರ್ಯಚರಣೆಯಲ್ಲಿ ಇರಾನ್‌ನ ಪರಮೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಅವರನ್ನು ಹತ್ಯೆ ಮಾಡಿರುವುದನ್ನು ವಿರೋಧಿಸಿ ಜಗತ್ತಿನ ಹಲವು ಕಡೆಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ.

ಖಮೇನಿ ಹತ್ಯೆ ವಿರೋಧಿಸಿ ಕಾಶ್ಮೀರದ ಹಲವು ಕಡೆಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ.

ಶಿಯಾ ಜನಸಂಖ್ಯೆ ಅಧಿಕವಿರುವ ಜಾಗಗಳಲ್ಲಿ ನೂರಾರು ಪ್ರತಿಭಟನಾಕಾರರು ಬೀದಿಗಿಳಿದಿದ್ದಾರೆ. ಅವರು ಶಾಂತಿಯುತ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಕ್ಷಿಣ ಅಮೆರಿಕದ ಪುಟ್ಟ ದೇಶವಾದ ಈಕ್ವೆಡಾರ್‌ನ ರಾಜಧಾನಿ ಕ್ವಿಟೊದಲ್ಲಿರುವ ಇರಾನಿನ ಸಾಂಸ್ಕೃತಿಕ ಕೇಂದ್ರದಲ್ಲಿ ಕೂಡ ಪ್ರತಿಭಟನೆ ನಡೆದಿದೆ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ.

ಕೋಲುಗಳು ಮತ್ತು ಕಲ್ಲುಗಳನ್ನು ಹಿಡಿದುಕೊಂಡು ಕಟ್ಟಡಕ್ಕೆ ಪ್ರವೇಶಿಸಿದ ಜನರು ಸಾಂಸ್ಕೃತಿಕ ಕೇಂದ್ರದ ಕಿಟಕಿಗಳನ್ನು ಒಡೆದಿದ್ದು, ಘಟನೆಯಲ್ಲಿ ಒಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ. ಅವರನ್ನು ಆಂಬ್ಯುಲೆನ್ಸ್‌ನಲ್ಲಿ ಕರೆದೊಯ್ಯಲಾಯಿತು. ಅವರ ಸ್ಥಿತಿ ಗಂಭೀರವಾಗಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇರಾನ್ ಮೇಲಿನ ಅಮೆರಿಕ ಹಾಗೂ ಇಸ್ರೇಲ್‌ ದಾಳಿಯನ್ನು ಖಂಡಿಸಿ ದಕ್ಷಿಣ ಕೊರಿಯಾದ ಸಿಯೋಲ್‌ನಲ್ಲಿನ ಅಮೆರಿಕ ರಾಯಭಾರ ಕಚೇರಿ ಎದುರು ಅಲ್ಲಿನ ನಾಗರಿಕರು ಪ್ರತಿಭಟನೆ ನಡೆಸಿದ್ದಾರೆ.

ಪರಮಾಣು ಒಪ್ಪಂದಕ್ಕೆ ಒಪ್ಪಿಕೊಂಡಿಲ್ಲ ಎನ್ನುವ ಕಾರಣಕ್ಕೆ ಇರಾನ್‌ ಮೇಲೆ ಇಸ್ರೇಲ್ ಹಾಗೂ ಅಮೆರಿಕ ಸೇರಿಕೊಂಡು ಶನಿವಾರ ದಾಳಿ ನಡೆಸಿದ್ದವು.

Dailyhunt
Disclaimer: This content has not been generated, created or edited by Dailyhunt. Publisher: Prajavani