Dailyhunt Logo
  • Light mode
    Follow system
    Dark mode
    • Play Story
    • App Story
ಖಮೇನಿ ಹತ್ಯೆಗೆ ಸೇಡು ತೀರಿಸಿಕೊಳ್ಳುವುದು ಕಾನೂನುಬದ್ಧ ಕರ್ತವ್ಯ: ಇರಾನ್ ಅಧ್ಯಕ್ಷ

ಖಮೇನಿ ಹತ್ಯೆಗೆ ಸೇಡು ತೀರಿಸಿಕೊಳ್ಳುವುದು ಕಾನೂನುಬದ್ಧ ಕರ್ತವ್ಯ: ಇರಾನ್ ಅಧ್ಯಕ್ಷ

ಟೆಹರಾನ್: ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಇರಾನ್‌ ಅಧ್ಯಕ್ಷ ಮಸೂದ್‌ ಪೆಜೆಶ್ಕಿಯಾನ್‌ ತೀವ್ರವಾಗಿ ಖಂಡಿಸಿದ್ದು, ಇದು 'ಮುಸ್ಲಿಮರ ವಿರುದ್ಧದ ಯುದ್ಧ ಘೋಷಣೆ' ಎಂದು ಅಕ್ರೋಶ ಹೊರಹಾಕಿದ್ದಾರೆ.

ಇಸ್ರೇಲ್ ಹಾಗೂ ಅಮೆರಿಕದ ಜಂಟಿ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದಾರೆ.

ಖಮೇನಿ ಹತ್ಯೆಗೆ ಸೇಡು ತೀರಿಸಿಕೊಳ್ಳುವುದು ನಮ್ಮ 'ಕಾನೂನುಬದ್ಧ ಕರ್ತವ್ಯ ಮತ್ತು ಹಕ್ಕು' ಎಂದು ಮಸೂದ್‌ ಪೆಜೆಶ್ಕಿಯಾನ್‌ ಪ್ರತಿಪಾದಿಸಿದ್ದಾರೆ.

ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಜಂಟಿ ದಾಳಿಯಲ್ಲಿ ಖಮೇನಿ ಹತ್ಯೆಯಾಗಿದ್ದಾರೆ ಎಂದು ಇರಾನ್ ಸರ್ಕಾರಿ ಮಾಧ್ಯಮ ದೃಢಪಡಿಸಿದೆ. ಹಾಗೆಯೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇಸ್ರೇಲ್ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಕೂಡಾ 'ಖಮೇನಿ' ಮೃತಪಟ್ಟಿರುವುದಾಗಿ ಹೇಳಿಕೊಂಡಿದ್ದಾರೆ.

ಇರಾನ್‌ ಮೇಲೆ ಅಮೆರಿಕ ಹಾಗೂ ಇಸ್ರೇಲ್‌ ಶನಿವಾರ ರಾತ್ರಿ ದೊಡ್ಡ ಮಟ್ಟದಲ್ಲಿ ದಾಳಿ ನಡೆಸಿವೆ. ಇರಾನ್‌ ಕೂಡ ಪ್ರತಿದಾಳಿ ನಡೆಸಿದ್ದು, ಇದರಿಂದ ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನ ಸ್ಥಿತಿ ಮನೆ ಮಾಡಿದೆ.

ಖಮೇನಿ ಮಗನಿಗಿಲ್ಲ ಸರ್ವೋಚ್ಚ ನಾಯಕನ ಪಟ್ಟ: ಇರಾನ್‌ ಆಡಳಿತದ ಚುಕ್ಕಾಣಿ ಈತನ ಕೈಗೆ!ಇರಾನ್ ಮೇಲೆ ಇಸ್ರೇಲ್‌-ಅಮೆರಿಕ ಜಂಟಿ ದಾಳಿ: ಸಾಮಾಜಿಕ ಮಾಧ್ಯಮಗಳಲ್ಲಿ ಹಲವು ಚರ್ಚೆ
Dailyhunt
Disclaimer: This content has not been generated, created or edited by Dailyhunt. Publisher: Prajavani