ಮಡಿಕೇರಿ: ಕಾಡಾನೆ- ಮಾನವ ಸಂಘರ್ಷ ತಡೆಯಲು ಕೇಂದ್ರ ರೂಪಿಸು ತ್ತಿರುವ ಪ್ರಾದೇಶಿಕ ಕಾರ್ಯಯೋಜನೆ ವ್ಯಾಪ್ತಿಗೆ ಕೊಡಗು ಜಿಲ್ಲೆಯನ್ನೂ ಸೇರ್ಪಡೆ ಮಾಡಲಾಗುವುದು ಎಂದು ಕೇಂದ್ರ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಭೂಪೇಂದ್ರ ಯಾದವ್ ತಿಳಿಸಿದ್ದಾರೆ.
ಆನೆಗಳ ವಾಸಸ್ಥಳ ಸುಧಾರಣೆ, ಆನೆ ಕಾರಿಡಾರ್‌ಗಳ ಸಂರಕ್ಷಣೆ ಮತ್ತು ನಿರ್ವಹಣೆ, ಮುನ್ನೆಚ್ಚರಿಕಾ ಎಚ್ಚರಿಕೆ ವ್ಯವಸ್ಥೆ, ತ್ವರಿತ ಪ್ರತಿಕ್ರಿಯೆ ವ್ಯವಸ್ಥೆ, ಸಮುದಾಯದ ಸಕ್ರಿಯ ಭಾಗವಹಿಸುವಿಕೆ ಈ ಯೋಜನೆಯಲ್ಲಿದ್ದು, ಇದಕ್ಕಾಗಿ ₹ 350 ಕೋಟಿಯನ್ನು ನಿರೀಕ್ಷಿಸಲಾಗಿದೆ.
ಇದಲ್ಲದೆ, ಭಾರತೀಯ ವನ್ಯಜೀವಿ ಸಂಸ್ಥೆ ದಕ್ಷಿಣ ಭಾರತದ ಮಾನವ-ಆನೆ ಸಹಬಾಳ್ವೆಗೆ ಸಂಬಂಧಿಸಿದಂತೆ ಉಪಗ್ರಹ ಟೆಲಿಮೆಟ್ರಿ ಮತ್ತು ಸಮೂಹ ಸಂವಹನ ಆಧಾರಿತ ಮುನ್ನೆಚ್ಚರಿಕಾ ವ್ಯವಸ್ಥೆ ಕುರಿತ ಅಧ್ಯಯನ ಕೈಗೊಳ್ಳಲು ಮುಂದಾಗಿದೆ. ಇದರ ಶಿಫಾರಸುಗಳ ಆಧಾರದ ಮೇಲೆ ಕೊಡಗು ಪ್ರದೇಶದಲ್ಲಿ ವಿಶೇಷ ಮುನ್ನೆಚ್ಚರಿಕಾ ವ್ಯವಸ್ಥೆ ಜಾರಿಗೊಳ್ಳುವ ಸಾಧ್ಯತೆಯೂ ಇದೆ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260704-51-702069808

