ಧಾರವಾಡ ಜಿಲ್ಲೆ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್‌ಗೌಡ ಗೌಡರ್ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ ಕುಲಕರ್ಣಿ ಸೇರಿದಂತೆ ಪ್ರಕರಣದ ಒಟ್ಟು 16 ಜನ ತಪ್ಪಿತಸ್ಥರಿಗೆ ಜನಪ್ರತಿನಿಧಿಗಳ ಸೆಷನ್ಸ್ ನ್ಯಾಯಾಲಯ ಜೀವಾವಧಿ ಮತ್ತು ಇನ್ನೊಬ್ಬ ಅಪರಾಧಿಗೆ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ಈ ಪ್ರಕರಣದ ಕುರಿತು ಜನಜಾಗೃತಿ ವೇದಿಕೆ ಅಧ್ಯಕ್ಷ ಬಸವರಾಜ ಕೊರವರ ಹಾಗೂ ವಕೀಲ ಸಂಜೀವ ಬಡಸ್ಕರ್ ಅವರು 'ಪ್ರಜಾವಾಣಿ'ಯೊಂದಿಗೆ ಮಾತನಾಡಿದ್ದು, ಸಂಪೂರ್ಣ ಮಾಹಿತಿ ಇಲ್ಲಿದೆ.

