ಕೋಲ್ಕತ್ತ: 'ಕಪ್ಪು ಶಿಲೀಂಧ್ರ ಸೋಂಕಿನಿಂದ (ಬ್ಲ್ಯಾಕ್ ಫಂಗಸ್) ಬಳಲುತ್ತಿದ್ದ 32 ವರ್ಷದ ಮಹಿಳೆಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಇಲ್ಲಿನ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾರೆ' ಎಂದು ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದರು.
'ಹರಿದೇವಪುರದ ನಿವಾಸಿ ಶಂಪಾ ಚಕ್ರವರ್ತಿ ಅವರಿಗೆ ಕೋವಿಡ್-19 ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಶಂಭುನಾಥ್ ಪಂಡಿತ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಅವರಲ್ಲಿ ಕಪ್ಪು ಶಿಲೀಂದ್ರ ಸೋಂಕು ಕಾಣಿಸಿಕೊಂಡಿತು. ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರ ಬೆಳಿಗ್ಗೆ ಅವರು ಮೃತಪಟ್ಟರು' ಎಂದು ಅವರು ಹೇಳಿದರು.
'ಕಪ್ಪು ಶಿಲೀಂಧ್ರ ಪ್ರಕರಣಗಳನ್ನು ಎದುರಿಸಲು ಆರೋಗ್ಯ ಇಲಾಖೆಯು ತಜ್ಞರ ಸಮಿತಿಯೊಂದನ್ನು ರಚಿಸಿದೆ.
ಕೋವಿಡ್ ಕುರಿತ ಎಲ್ಲಾ ಲೇಟೆಸ್ಟ್ ಅಪ್‌ಡೇಟ್ಸ್ ಓದಿ

