Dailyhunt Logo
  • Light mode
    Follow system
    Dark mode
    • Play Story
    • App Story
ಕೊಳ್ಳೇಗಾಲದಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಿರಲಿ

ಕೊಳ್ಳೇಗಾಲದಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಿರಲಿ

ಕೊಳ್ಳೇಗಾಲ: ತಾಲ್ಲೂಕಿನ ದೊಡ್ಡಿಂದುವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ ಎಂದು ಗ್ರಾಮಸ್ಥರು ಶಾಸಕ ಎಂ.ಆರ್.ಮಂಜುನಾಥ್ ಅವರಿಗೆ ತಿಳಿಸಿದರು.

ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಎಂ.ಆರ್.ಮಂಜುನಾಥ್, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಗ್ರಾಮಕ್ಕೆ ಭೇಟಿ ನೀಡಿ, ಕುಡಿಯುವ ನೀರಿನ ಸಮಸ್ಯೆ ಹಾಗೂ ಸಾರ್ವಜನಿಕರು ಎದುರಿಸುತ್ತಿರುವ ತೊಂದರೆಗಳ ಕುರಿತು ಮಾಹಿತಿ ಪಡೆದುಕೊಂಡರು.

ಇಲಾಖೆ ಅಧಿಕಾರಿಗಳು ಕೂಡಲೇ ಕ್ರಮಕೈಗೊಂಡು ನೀರಿನ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಗ್ರಾಮಸ್ಥರಿಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, 15 ದಿನಗಳೊಳಗೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಅಲ್ಲದೆ, ಕೈಗೊಂಡ ಕ್ರಮಗಳ ಕುರಿತು ವರದಿ ಸಲ್ಲಿಸುವಂತೆಯೂ ನಿರ್ದೇಶನ ನೀಡಿದರು.

ಗ್ರಾಮದಲ್ಲಿ ಹೊಸ ಬಸ್ ನಿಲ್ದಾಣದ ವ್ಯವಸ್ಥೆ ಕಲ್ಪಿಸಿಕೊಡಬೇಕು. ಅಳವಡಿಸಿರುವ ಹೈಮಾಸ್ಟ್ ದೀಪ ಕಾರ್ಯನಿರ್ವಹಿಸದೆ ಇರುವುದರಿಂದ ಅದನ್ನು ದುರಸ್ತಿಪಡಿಸಿ, ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಗ್ರಾಮಸ್ಥರು ಮನವಿ ಮಾಡಿದರು.

ಹೈಮಾಸ್ಟ್ ದೀಪವನ್ನು ಕೂಡಲೇ ದುರಸ್ತಿಪಡಿಸಿ ವಿದ್ಯುತ್ ಸಂಪರ್ಕ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಜೊತೆಗೆ, ಗ್ರಾಮದಲ್ಲಿ ಹೊಸ ಬಸ್ ನಿಲ್ದಾಣದ ವ್ಯವಸ್ಥೆ ಕಲ್ಪಿಸುವ ಸಂಬಂಧವೂ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಗ್ರಾಮಸ್ಥರಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸುವುದು ಆದ್ಯತೆಯಾಗಿದೆ. ಕುಡಿಯುವ ನೀರು, ಸಾರಿಗೆ ಹಾಗೂ ಬೀದಿ ದೀಪಗಳಂತಹ ಸಾರ್ವಜನಿಕ ಅಗತ್ಯಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳು ತ್ವರಿತವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಕುಡಿಯುವ ನೀರಿನ ನೈರ್ಮಲ್ಯ ಇಲಾಖೆಯ ಎಇಇ ಸುಧನ್ವ ನಾಗ್, ಮುಖಂಡ ಶಿವರುದ್ರಸ್ವಾಮಿ, ಮುತ್ತುರಾಜ್, ನಾಗಭೂಷಣ್ ಗೋವಿಂದ, ಮಾದೇಶ್, ನಯೀಮ್ ಪಾಷ, ಕೆಂಪರಾಜು, ವೆಂಕಟರಂಗ, ಕುಮಾರ್, ಗೌಡಗೆರೆ ಶೆಟ್ಟಿ, ಪುಷ್ಪ ರಾಜ್, ಎಸ್‌.ಆರ್ ಮಹದೇವ್, ಕೃಷ್ಣ, ಮಾದಯ್ಯ, ಮಹೇಶ್ ಹಾಜರಿದ್ದರು.

261103-37-504226158

Dailyhunt
Disclaimer: This content has not been generated, created or edited by Dailyhunt. Publisher: Prajavani