ಕೊಪ್ಪಳ: ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್) ಆಡಳಿತಾಧಿಕಾರಿ ಬಿ. ಕಲ್ಲೇಶ ಅವರ ಮನೆ ಮೇಲೆ ಶುಕ್ರವಾರ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲಿನೆಯ ನಡೆಸುತ್ತಾರೆ.
ಇಲ್ಲಿನ ಭಾಗ್ಯನಗರದ ಯತ್ನಟ್ಟಿ ರಸ್ತೆಯಲ್ಲಿರುವ ಕಲ್ಲೇಶ ಕುಟುಂಬದ ಒಡೆತನದ ಖಾಸಗಿ ಶಾಲೆ ಹಾಗೂ ಕಿಮ್ಸ್ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆದಿದೆ.
ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಕುರಿತು ದೂರು ಬಂದಿದ್ದರಿಂದ ದಾಳಿ ನಡೆಸಲಾಗಿದೆ ಎಂದು ಕೊಪ್ಪಳ ಲೋಕಾಯುಕ್ತ ಪೊಲೀಸರೊಬ್ಬರು ಖಚಿತ ಪಡಿಸಿದ್ದಾರೆ.

