ಕೊಪ್ಪಳ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಕಾರ್ಯಕ್ರಮ ಹಮ್ಮಿಕೊಂಡಿದ್ದು ಬೂತ್ ಮಟ್ಟದ ಅಧಿಕಾರಿಗೆ ಅಗತ್ಯ ಮಾಹಿತಿ ನೀಡಲು ಸಹಕರಿಸಬೇಕೆಂದು ಕೊಪ್ಪಳ ತಾಲ್ಲೂಕು ಪಂಚಾಯತ್‌ರಾಜ್ ಸಹಾಯಕ ನಿರ್ದೇಶಕ ಮಹೇಶ್ ಎಚ್. ಹೇಳಿದರು.
ತಾಲ್ಲೂಕು ಸ್ವೀಪ್ ಸಮಿತಿ ಹಾಗೂ ಇರಕಲ್ಲಗಡ ಗ್ರಾಮ ಪಂಚಾಯಿತಿ ಸಂಯುಕ್ತಾಶ್ರಯದಲ್ಲಿ ಗುರುವಾರ ಇರಕಲ್ಲಗಡ ಗ್ರಾಮದಲ್ಲಿ ಕಾಲೇಜು ವಿದ್ಯಾರ್ಥಿಗಳ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ವಿದ್ಯಾರ್ಥಿಗಳಿಂದ ಕಾಲ್ನಡಿಗೆ ಮೂಲಕ ಜಾಗೃತಿ ಜಾಥಾವು ಸರ್ಕಾರಿ ಪದವಿಪೂರ್ವ ಕಾಲೇಜಿನಿಂದ ಪ್ರಾರಂಭವಾಗಿ ಗ್ರಾಮದ ಅರಳಿಕಟ್ಟೆ ಮಾರ್ಗವಾಗಿ ಜಾಗೃತಿ ಮೂಡಿಸಿ ಪುನಃ ಕಾಲೇಜಿನ ಆವರಣದಲ್ಲಿ ಮುಕ್ತಾಯಗೊಂಡಿತು.
ತಾಲ್ಲೂಕು ಯೋಜನಾಧಿಕಾರಿ ರಾಜೇಸಾಬ ನದಾಫ್, ಸರ್ಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಹನಮಂತಪ್ಪ ಎಚ್, ಪಿಡಿಒ ಸಿದ್ದಮ್ಮ, ತಾಲ್ಲೂಕು ಐಇಸಿ ಸಂಯೋಜಕ ದೇವರಾಜ ಪತ್ತಾರ, ಗ್ರಾ.ಪಂ. ಕಾರ್ಯದರ್ಶಿ ಪೂರ್ಣೆಂದ್ರಯ್ಯ ಭೂಸನೂರಮಠ, ಸಂಜೀವಿನಿ ಯೋಜನೆಯ ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕ ಸುನೀಲ್, ಉಪನ್ಯಾಸಕ ಶ್ರೀನಿವಾಸಗೌಡ, ವೆಂಕಟರಡ್ಡಿ, ದ್ಯಾಮಣ್ಣ ಸಂಜೀವಿನಿ ಯೋಜನೆಯ ವಿದ್ಯಾಲಕ್ಷ್ಮೀ, ಕರವಸೂಲಿಗಾರ ಕೊಟ್ರೇಶ್, ಗ್ರಾಮ ಪಂಚಾಯಿತಿ ಡಿಇಒ ಮೌನೇಶ ಇದ್ದರು.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260704-35-1715403057

