Dailyhunt Logo
  • Light mode
    Follow system
    Dark mode
    • Play Story
    • App Story
ಕೊಪ್ಪಳದಲ್ಲಿ ನೂರು ದಿನಗಳ ಬರ ನಿರ್ವಹಣೆ ಯೋಜನೆಗೆ ಸೂಚನೆ

ಕೊಪ್ಪಳದಲ್ಲಿ ನೂರು ದಿನಗಳ ಬರ ನಿರ್ವಹಣೆ ಯೋಜನೆಗೆ ಸೂಚನೆ

ಕೊಪ್ಪಳ: ಯಲಬುರ್ಗಾ ಮತ್ತು ಕುಕನೂರು ತಾಲ್ಲೂಕುಗಳಲ್ಲಿ ಮುಂಬರುವ ಮೂರು ತಿಂಗಳವರೆಗೆ ಕುಡಿಯುವ ನೀರಿನ ಪೂರೈಕೆ, ಬೆಳೆ ವಿಮಾ ನೋಂದಣಿ, ಬಿತ್ತನೆಗೆ ರಸಗೊಬ್ಬರದ ಲಭ್ಯತೆ ಸೇರಿದಂತೆ ಬರ ನಿರ್ವಹಣೆಗೆ ಅಗತ್ಯ ಕ್ರಿಯಾಯೋಜನೆ ರೂಪಿಸಬೇಕು ಎಂದು ಶಾಸಕ ಬಸವರಾಜ ರಾಯರಡ್ಡಿ ಅವರು ಅಧಿಕಾರಿಗಳಿಗ ಸೂಚಿಸಿದರು.

ಯಲಬುರ್ಗಾ ಮತ್ತು ಕುಕನೂರು ತಾಲ್ಲೂಕುಗಳಲ್ಲಿ ಪ್ರಕೃತಿ ವಿಕೋಪದ ನಿರ್ವಹಣೆಯ ಬಗ್ಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಪ್ರತ್ಯೇಕ ಸಭೆ ನಡೆಸಿದ ಅವರು 'ಪ್ರಸ್ತುತ ಮಳೆ ಕೊರತೆಯಿಂದಾಗಿ ಯಲಬುರ್ಗಾ ಮತ್ತು ಕುಕನೂರು ತಾಲ್ಲೂಕುಗಳಲ್ಲಿ ಬೆಳೆ ಹಾನಿ ಎಷ್ಟಾಗಬಹುದು ಎಂಬ ವಿವರವನ್ನು ಹೆಕ್ಟೇರ್‌ವಾರು ಸಂಗ್ರಹಿಸಿ ಪರಿಹಾರದ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕು. ಡಿಬಿಒಟಿ ಯೋಜನೆಗೆ ಸಂಬಂಧಿಸಿದಂತೆ ಮೇಲ್ಮಟ್ಟದ ಜಲಾಗಾರಗಳಲ್ಲಿ ನೀರಿರುತ್ತದೆ. ಆ ನೀರು ಪೈಪ್‌ಲೈನ್ ಮೂಲಕ ಹಳ್ಳಿಗಳಿಗೆ ಸರಿಯಾಗಿ ತಲುಪುತ್ತಿಲ್ಲ. ಇದ್ದಕ್ಕೆ ಕಾರಣ ಜೆಜೆಎಂ ಕಾಮಗಾರಿಯ ವೈಫಲ್ಯ' ಎಂದರು. ಮುಂದಿನ ನೂರು ದಿನಗಳ ಯೋಜನೆ ರೂಪಿಸಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ, ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ್ ನೇಗಿ, ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260704-35-2037283955

Dailyhunt
Disclaimer: This content has not been generated, created or edited by Dailyhunt. Publisher: Prajavani