ನವದೆಹಲಿ/ಕೌಲಾಲಂಪುರ: ಕೌಲಾಲಂಪುರ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಲೇಷ್ಯಾದ ಪ್ರಧಾನಿ ಅನ್ವರ್ ಇಬ್ರಾಹಿಂ ಅವರು ಆತ್ಮೀಯವಾಗಿ ಬರಮಾಡಿಕೊಂಡರು.
ಮೋದಿ ಅವರನ್ನು ಮಲೇಷ್ಯಾದ ಸಾಂಪ್ರದಾಯಿಕ ಹಾಡು-ನೃತ್ಯಗಳ ಮೂಲಕ ಕಲಾವಿದರು ಬರಮಾಡಿಕೊಂಡರು.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಮೋದಿ, ನನ್ನ ಸ್ನೇಹಿತ ಅನ್ವರ್ ಇಬ್ರಾಹಿಂ ಅವರು ನನ್ನನ್ನು ಸ್ವಾಗತಿಸಿದ ರೀತಿ ಕಂಡು ಭಾವುಕನಾಗಿದ್ದೇನೆ. ನಮ್ಮಿಬ್ಬರ ಮಾತುಕತೆಯಿಂದಾಗಿ ಭಾರತ ಮತ್ತು ಮಲೇಷ್ಯಾ ನಡುವಿನ ಸ್ನೇಹ- ಸಂಬಂಧಗಳನ್ನು ಮತ್ತಷ್ಟು ಬಲಪಡುವುದಾಗಿ ಭಾವಿಸುತ್ತೇನೆ ಎಂದು ಹೇಳಿದ್ದಾರೆ.
ಭಾರತದಲ್ಲಿ ವಾಸಿಸುವವರೆಲ್ಲರೂ ಹಿಂದೂಗಳೇ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್T20 World Cup: ಸೂರ್ಯಕುಮಾರ್ ಏಕಾಂಗಿ ಹೋರಾಟ; ಅಮೆರಿಕದ ಎದುರು ಭಾರತ ಜಯಭೇರಿಇತ್ತೀಚಿನ ವರ್ಷಗಳಲ್ಲಿ ಭಾರತ ಮತ್ತು ಮಲೇಷ್ಯಾ ನಡುವಿನ ಐತಿಹಾಸಿಕ ಸಂಬಂಧಗಳು ಸ್ಥಿರವಾಗಿದೆ. ರಕ್ಷಣಾ ಮತ್ತು ಭದ್ರತಾ ಸಂಬಂಧ ಮತ್ತಷ್ಟು ಬಲಿಷ್ಠಗೊಳಿಸಲು, ಆರ್ಥಿಕ ಮತ್ತು ನಾವೀನ್ಯತೆ ಪಾಲುದಾರಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಉಭಯ ನಾಯಕರ ಮಾತುಕತೆ ಸಹಕಾರಿಯಾಗಲಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ವ್ಯಾಪಾರ, ಹೂಡಿಕೆ, ಇಂಧನ ಮತ್ತು ಕಡಲ ಭದ್ರತೆ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಬಾಂಧವ್ಯ ವೃದ್ಧಿಯಾಗಲು ಈ ಮಾತುಕತೆ ಅನುಕೂಲವಾಗಿದೆ ಎಂದು ಮೂಲಗಳು ತಿಳಿಸಿವೆ.

