Dailyhunt
ಕೋವಿಡ್‌ 19 ಪ್ರಕರಣ ಶೂನ್ಯ

ಕೋವಿಡ್‌ 19 ಪ್ರಕರಣ ಶೂನ್ಯ

ಚಾಮರಾಜನಗರ: ಜಿಲ್ಲೆಯಲ್ಲಿ ಕೋವಿಡ್‌ ಹಾವಳಿ ಆರಂಭಗೊಂಡ ನಂತರ ಇದೇ ಮೊದಲ ಬಾರಿಗೆ ದಿನವೊಂದರಲ್ಲಿ ಒಂದೂ ಕೋವಿಡ್‌ ಪ್ರಕರಣ ದೃಢಪಟ್ಟಿಲ್ಲ.

ಮಂಗಳವಾರ 781 ಜನರ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, ಎಲ್ಲರ ವರದಿಗಳು ನೆಗೆಟಿವ್‌ ಆಗಿವೆ. ಮೂವರು ಸೋಂಕಿನಿಂದ ಗುಣಮುಖರಾಗಿದ್ದಾರೆ.

ಸಾವಿನ ಪ್ರಕರಣ ವರದಿಯಾಗಿಲ್ಲ.

ಸಕ್ರಿಯ ಪ್ರಕರಣಗಳ ಸಂಖ್ಯೆ 15ಕ್ಕೆ ಇಳಿದಿದೆ. ತುರ್ತು ನಿಗಾ ಘಟಕದಲ್ಲಿ ಯಾರೂ ಇಲ್ಲ. ಎಂಟು ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ 32,523 ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 31,970 ಮಂದಿ ಸೋಂಕು ಮುಕ್ತರಾಗಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Prajavani