Tuesday, 04 May, 7.25 pm ಪ್ರಜಾವಾಣಿ

ರಾಯಚೂರು
ಕೋವಿಡ್‌: ಇಬ್ಬರ ಸಾವು

ಮಸ್ಕಿ: ಪಟ್ಟಣದಲ್ಲಿ ಕೋವಿಡ್‌ ಸೋಂಕಿನಿಂದ ಇಬ್ಬರು ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.

ಪಟ್ಟಣದಲ್ಲಿ ಒಬ್ಬರು ಹಾಗೂ ತಾಲ್ಲೂಕಿನ ಗುಡದೂರು ಗ್ರಾಮದಲ್ಲಿ ಒಬ್ಬರು ಕೋವಿಡ್‌ ಸೋಂಕಿನಿಂದ ಮೃತಪಟ್ಟಿದ್ದು, ಅವರನ್ನು ಕೋವಿಡ್‌ ಮಾರ್ಗಸೂಚಿ ಅನ್ವಯ ಅಂತ್ಯಸಂಸ್ಕಾರ ನಡೆಸಲಾಗಿದೆ ಎಂದು ವೈದ್ಯಾಧಿಕಾರಿ ಡಾ.ಮೌನೇಶ ತಿಳಿಸಿದ್ದಾರೆ.

ಪಟ್ಟಣದಲ್ಲಿ ನಾಲ್ಕು ಜನಕ್ಕೆ ಕೋವಿಡ್‌ ಪಾಸಿಟಿವ್ ವರದಿ ಬಂದಿದೆ ಎಂದು ತಿಳಿಸಿದ್ದಾರೆ. ಸೋಂಕಿತರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ ಎಂದು ಹೇಳಿದರು.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Prajavani
Top