Dailyhunt
ಕೋವಿಶೀಲ್ಡ್ ಲಸಿಕೆ ಪಡೆದ ಶಾಸಕರು

ಕೋವಿಶೀಲ್ಡ್ ಲಸಿಕೆ ಪಡೆದ ಶಾಸಕರು

ಬೀದರ್: ಶಾಸಕ ಬಂಡೆಪ್ಪ ಕಾಶೆಂಪೂರ್, ವಿಧಾನ ಪರಿಷತ್ ಸದಸ್ಯರಾದ ರಘುನಾಥರಾವ್ ಮಲ್ಕಾಪುರೆ ಹಾಗೂ ಅರವಿಂದಕುಮಾರ ಅರಳಿ ಅವರು ನಗರದಲ್ಲಿ ಬುಧವಾರ ಕೋವಿಡ್ ವಿರುದ್ಧದ ಕೋವಿಶೀಲ್ಡ್ ಲಸಿಕೆ ಪಡೆದರು.

100 ಹಾಸಿಗೆಗಳ ತಾಯಿ-ಮಕ್ಕಳ ಆಸ್ಪತ್ರೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಅವರಿಗೆ ಲಸಿಕೆ ನೀಡಿದರು.

ಕೋವಿಶೀಲ್ಡ್ ಲಸಿಕೆಯಿಂದ ಯಾವುದೇ ಅಡ್ಡ ಪರಿಣಾಮ ಕಂಡು ಬಂದಿಲ್ಲ ಎಂದು ಶಾಸಕತ್ರಯರು ತಿಳಿಸಿದರು. ಲಸಿಕೆ ಸುರಕ್ಷಿತವಾಗಿದೆ. ಯಾವುದೇ ಅಡ್ಡ ಪರಿಣಾಮಗಳು ಉಂಟಾಗುವುದಿಲ್ಲ. ಎಲ್ಲರೂ ಲಸಿಕೆ ಪಡೆಯಬೇಕು ಎಂದು ಮನವಿ ಮಾಡಿದರು.

ಆಸ್ಪತ್ರೆಯ ಆಡಳಿತಾಧಿಕಾರಿ ಮೊಹಮ್ಮದ್ ಸೋಹೆಲ್, ಡಾ. ರತಿಕಾಂತ ಸ್ವಾಮಿ, ಡಾ. ಸರೋಜಾ ಪಾಟೀಲ ಇದ್ದರು.

Dailyhunt
Disclaimer: This content has not been generated, created or edited by Dailyhunt. Publisher: Prajavani