ಗದಗ: 2026-27ನೇ ಸಾಲಿನಲ್ಲಿ ಕೃಷಿ ಪಂಡಿತ ಪ್ರಶಸ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಗಸ್ಟ್ 31 ಕೊನೆಯ ದಿನವಾಗಿದೆ.
ಕೆ-ಕಿಸಾನ್ ಪೋರ್ಟಲ್‌ನಲ್ಲಿ ರೈತ ಸಂಪರ್ಕ ಕೇಂದ್ರ, ನಾಗರಿಕ ಸೇವಾ ಕೇಂದ್ರ ಅಥವಾ ಸ್ವತಃ ರೈತರೇ ಅಗತ್ಯ ದಾಖಲೆ, ಎಫ್‌ಐಆಡಿ ಸಂಖ್ಯೆ ಮೂಲಕ ಅರ್ಜಿ ಸಲ್ಲಿಸಬಹುದು.
ರೈತ ಸಂಪರ್ಕ ಕೇಂದ್ರಗಳಲ್ಲಿ ಭೌತಿಕವಾಗಿಯೂ ಅರ್ಜಿ ಸ್ವೀಕರಿಸಲಾಗುತ್ತದೆ.
ಅರ್ಜಿ ಸಲ್ಲಿಸಿದ ಎಲ್ಲಾ ರೈತರ ಜಮೀನುಗಳಿಗೆ ಜಿಲ್ಲಾ ಮಟ್ಟದ ಕೃಷಿ ಪಂಡಿತ ಪ್ರಶಸ್ತಿ ಪರಿಶೀಲನಾ ತಂಡವು ಭೇಟಿ ನೀಡಿ, ಮಾರ್ಗಸೂಚಿ ಅನ್ವಯ ಪ್ರಶಸ್ತಿಗೆ ಆಯ್ಕೆ ಮಾಡುತ್ತದೆ. ಪುರುಷರು ಹಾಗೂ ಮಹಿಳೆಯರ ವಿಭಾಗದಲ್ಲಿ ತಲಾ ಮೂವರ ಹೆಸರನ್ನು ಅಂತಿಮಗೊಳಿಸಿ, ಕೇಂದ್ರ ಕಚೇರಿಗೆ ಕಳುಹಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗೆ, ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳು ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಜಂಟಿ ಕೃಷಿ ನಿದೇಶಕಿ ಚೇತನಾ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260705-23-805617491

