Dailyhunt Logo
  • Light mode
    Follow system
    Dark mode
    • Play Story
    • App Story
'ಕೃಷಿ ರತ್ನ' ಪ್ರಶಸ್ತಿಗೆ ರಾಯಚೂರು ಕೃಷಿ ವಿಶ್ವವಿದ್ಯಾಲಯದಿಂದ ಅರ್ಜಿ ಆಹ್ವಾನ

'ಕೃಷಿ ರತ್ನ' ಪ್ರಶಸ್ತಿಗೆ ರಾಯಚೂರು ಕೃಷಿ ವಿಶ್ವವಿದ್ಯಾಲಯದಿಂದ ಅರ್ಜಿ ಆಹ್ವಾನ

ಬೆಂಗಳೂರು: ಕೃಷಿ ವಲಯದಲ್ಲಿ ಸಾಧನೆ ಮಾಡಿದ ಅರ್ಹ ರೈತರನ್ನು ಗೌರವಿಸಲು ಕೃಷಿ ರತ್ನ ಪ್ರಶಸ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ 18ನೇ ಸಂಸ್ಥಾಪನಾ ದಿನಾಚರಣೆಯನ್ನು ನವೆಂಬರ್ 22 ರಂದು ಮುಖ್ಯ ಆವರಣದಲ್ಲಿ ಆಯೋಜಿಸಲಾಗಿದ್ದು, ಈ ಸಂದರ್ಭದಲ್ಲಿ ಪ್ರದಾನ ಮಾಡಲಾಗುವ ಪ್ರತಿಷ್ಠಿತ 'ಕೃಷಿ ರತ್ನ' ಪ್ರಶಸ್ತಿಗೆ ಕಲ್ಯಾಣ ಕರ್ನಾಟಕ ಭಾಗದ ಪ್ರಗತಿಪರ ಕೃಷಿಕರು ಅರ್ಜಿ ಸಲ್ಲಿಸಬಹುದು.

2025-26ನೇ ಸಾಲಿನ ಸಾಧನೆಗಾಗಿ ನೀಡಲಾಗುವ ಈ ಪ್ರಶಸ್ತಿಗೆ ಸಂಬAಧಿಸಿದ ಅರ್ಜಿ ನಮೂನೆಯನ್ನು ಬಳ್ಳಾರಿಯ ಹಗರಿ ಕೃಷಿ ವಿಜ್ಞಾನ ಕೇಂದ್ರ (ಕೆವಿಕೆ) ಹಾಗೂ ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಪಡೆಯಬಹುದಾಗಿದೆ. ಅಲ್ಲದೆ, ವಿಶ್ವವಿದ್ಯಾಲಯದ ಅಧಿಕೃತ ವೆಬ್ ಸೈಟ್ uasraichur.karnataka.gov.in ನಲ್ಲೂ ಅರ್ಜಿಗಳು ಸಿಗಲಿವೆ.

ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಹಗರಿಯ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರ ಕಚೇರಿಗೆ ಸಲ್ಲಿಸಲು ನವೆಂಬರ್ 12 ರ ಸಂಜೆ 5 ಗಂಟೆ ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿಯ (ಹಗರಿ) ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರನ್ನು ಹಾಗೂ ದೂರವಾಣಿ ಸಂಖ್ಯೆ: 9480696314 / 315 / 316 / 317 / 318 / 319 / 334 / 335 / 336 ಗಳನ್ನು ಸಂಪರ್ಕಿಸಬಹುದು ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Prajavani