ಉಡುಪಿ: ಕುಂದಾಪುರ ಶಿಶು ಅಭಿವೃದ್ಧಿ ವ್ಯಾಪ್ತಿಯ 4 ಅಂಗನವಾಡಿ ಕಾರ್ಯಕರ್ತೆ ಮತ್ತು 8 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಮರು ಅರ್ಜಿ ಸಲ್ಲಿಸಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಅದೇ ಗ್ರಾಮ/ವಾರ್ಡ್/ ಸ್ಥಳೀಯ ಅಂಗನವಾಡಿ ಕಂ ಕ್ರಷ್ ಕೇಂದ್ರದ ಸರ್ವೇ ವ್ಯಾಪ್ತಿಯಲ್ಲಿ ವಾಸವಿರಬೇಕು.
ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಅರ್ಜಿಗಳನ್ನು ಪಡೆದು ಭರ್ತಿಮಾಡಿ ಕಚೇರಿಯಲ್ಲಿಟ್ಟಿರುವ ಅರ್ಜಿ ಪೆಟ್ಟಿಗೆಯಲ್ಲಿ ಇದೇ 19ರ ಒಳಗಾಗಿ ಹಾಕಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ, ಶಾಸ್ತ್ರೀ ಸರ್ಕಲ್, ಕುಂದಾಪುರ, ದೂರವಾಣಿ ಸಂಖ್ಯೆ:08254-230807 ಅನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
261104-28-919138427

