Dailyhunt Logo
  • Light mode
    Follow system
    Dark mode
    • Play Story
    • App Story
ಕುಶಾಲನಗರದಲ್ಲಿ ಸಾಲುಮರದ ತಿಮ್ಮಕ್ಕ ಹೆಸರಿನಲ್ಲಿ ಉದ್ಯಾನ ನಿರ್ಮಾಣ

ಕುಶಾಲನಗರದಲ್ಲಿ ಸಾಲುಮರದ ತಿಮ್ಮಕ್ಕ ಹೆಸರಿನಲ್ಲಿ ಉದ್ಯಾನ ನಿರ್ಮಾಣ

ಕುಶಾಲನಗರ: ತಾಲ್ಲೂಕಿನ ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ವತಿಯಿಂದ ವೃಕ್ಷ ಮಾತೆ ಸಾಲುಮರ ತಿಮ್ಮಕ್ಕ ಉದ್ಯಾನವನ ನಿರ್ಮಿಸಲು ಉದ್ದೇಶಿಸಿಸಲಾಗಿದೆ ಎಂದು ಸೋಮವಾರಪೇಟೆ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನವೀನ್ ಕುಮಾರ್ ಹೇಳಿದರು

ಅರಣ್ಯ ಇಲಾಖೆ ಮತ್ತು ಕಾವೇರಿ ಪರಿಸರ ರಕ್ಷಣಾ ಬಳಗದ ಆಶ್ರಯದಲ್ಲಿ ಪಟ್ಟಣದ ಟೋಲ್‌ಗೇಟ್ ಬಳಿಯ ಕಾವೇರಿ ರೋಟರಿ ಉದ್ಯಾನದಲ್ಲಿ ಸಾಲುಮರ ತಿಮ್ಮಕ್ಕ ಅವರ 115ನೇ ಜನ್ಮದಿನದ ಅಂಗವಾಗಿ ಏರ್ಪಡಿಸಿದ್ದ ವಿದ್ಯಾರ್ಥಿಗಳೊಂದಿಗೆ ಪರಿಸರ ಮಾಹಿತಿ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕಾವೇರಿ ಮತ್ತು ಪರಿಸರ ಬಳಗದ ಸಂಚಾಲಕ ಎಂ.ಎನ್. ಚಂದ್ರಮೋಹನ್, ರೋಟರಿ ಮಾಜಿ ಅಧ್ಯಕ್ಷ ಮನು ಪೆಮ್ಮಯ್ಯ, ಭಾರತ ಮಾತಾ ವಿದ್ಯಾಸಂಸ್ಥೆಯ ಆಡಳಿತ ಅಧಿಕಾರಿ ಫಾ. ಪ್ರದೀಶ್ ದಿನದ ಮಹತ್ವದ ಬಗ್ಗೆ ಮಾತನಾಡಿದರು.

ಭಜನ್ ಬೋಪಣ್ಣ ಅವರ ಪುತ್ರ ಇಂಡಿಯನ್ ಮೋಗ್ಲಿ ಖ್ಯಾತಿಯ ಪುಟ್ಟ ಬಾಲಕ ವಿಯಾನ್ ಬೋಪಣ್ಣ ಅವರು ಸಾಲುಮರ ತಿಮ್ಮಕ್ಕ ಅವರ ಬಗ್ಗೆ ಮಾಹಿತಿ ಉಳ್ಳ ಬಿತ್ತಿ ಪತ್ರವನ್ನು ಬಿಡುಗಡೆಗೊಳಿಸಿದರು. ಕೊಡವ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಬಾಚಣಿಯಂಡ ಅಪ್ಪಣ್ಣ ಅಧ್ಯಕ್ಷತೆ ವಹಿಸಿದ್ದರು. ಕಾವೇರಿ ರಿವರ್ ಸೇವಾ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಮಂಡೆಪಂಡ ಬೋಸ್ ಮೊಣ್ಣಪ್ಪ, ಸಬಲಂ ಭೋಜಣ್ಣ ರೆಡ್ಡಿ, ವನಿತಾ ಚಂದ್ರಮೋಹನ್, ಧರಣಿ ಸೋಮಯ್ಯ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಇದೇ ಸಂದರ್ಭ ಕಾವೇರಿ ರೋಟರಿ ಉದ್ಯಾನವನ ನಿರ್ಮಾತೃ ಮನುಪೆಮ್ಮಯ್ಯ, ಪರಿಸರ ತಜ್ಞ ಭಜನ್ ಬೋಪಣ್ಣ ಅವರನ್ನು ಸನ್ಮಾನಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260704-51-27909137

Dailyhunt
Disclaimer: This content has not been generated, created or edited by Dailyhunt. Publisher: Prajavani