Dailyhunt Logo
  • Light mode
    Follow system
    Dark mode
    • Play Story
    • App Story
ಮಾದಾಪಟ್ಟಣ: ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ

ಮಾದಾಪಟ್ಟಣ: ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರು ಮೃತಪಟ್ಟಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಮಾದಾಪಟ್ಟಣದಲ್ಲಿರುವ ಕಾವೇರಿ ಜಲ್ಲಿ ಕ್ರಷರ್‌ನಲ್ಲಿ ಗುರುವಾರ ನಡೆದಿದೆ. ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರ ಶವಗಳನ್ನು ಹೊರೆತೆಗೆಯುವ ಕಾರ್ಯಾಚರಣೆ ಆರಂಭವಾಗಿದೆ.

ವಿಷಯ ತಿಳಿದು ಸ್ಥಳಕ್ಕೆ ತಾವರೆಕೆರೆ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ. ಮೃತರೆಲ್ಲರೂ ದಿನಗೂಲಿ ಕಾರ್ಮಿಕರಾಗಿದ್ದು, ಕ್ರಷರ್ ಬಳಿಯೇ ವಾಸಿಸುತ್ತಿದ್ದರು ಎನ್ನಲಾಗಿದೆ. ಬೆಳಿಗ್ಗೆ 7.30ರ ಸುಮಾರಿಗೆ ಎಂದಿನಂತೆ ಕೆಲಸದಲ್ಲಿ ತೊಡಗಿದ್ದಾಗ ಘಟನೆ ಸಂಭವಿಸಿದೆ.

ಗಾಯಾಳುಗಳನ್ನು ರಾಜರಾಜೇಶ್ವರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಬೆಳಿಗ್ಗೆ 7.30ರ ಸುಮಾರಿಗೆ ಕಾರ್ಮಿಕರು ಕೆಲಸ ಮಾಡುತ್ತಿದ್ದಾಗ, ಇಟಾಚಿ ಮೇಲಿನಿಂದ ಹಠಾತ್ತಾಗಿ ಬಂಡೆ ಕುಸಿದು ಬಿದ್ದಿತ್ತು. ಬಂಡೆಯ ಕೆಳಗೆ ಇನ್ನಷ್ಟು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಕಾರ್ಯಾಚರಣೆ ನಡೆಯುತ್ತಿದೆ.

ಈ ಕ್ರಷ‌ರ್ ಆನಂದಸ್ವಾಮಿ ಎಂಬುವವರಿಗೆ ಸೇರಿದೆ ಎಂದು ತಿಳಿದುಬಂದಿದ್ದು, ಪೊಲೀಸರು ಮಾಲಿಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಾದಾಪಟ್ಟಣ ಕಲ್ಲು ಕ್ವಾರಿ ದುರಂತ: ಸಿಎಂ ಡಿಕೆಶಿ, ಎಚ್‌ಡಿಕೆ ಸೇರಿ ಗಣ್ಯರ ಸಂತಾಪ
Dailyhunt
Disclaimer: This content has not been generated, created or edited by Dailyhunt. Publisher: Prajavani