Dailyhunt Logo
  • Light mode
    Follow system
    Dark mode
    • Play Story
    • App Story
ಮಾನಸಿಕ ಒತ್ತಡ: ಉತ್ತರ ಪ್ರದೇಶದಲ್ಲಿ ನೀಟ್ ಆಕಾಂಕ್ಷಿ ಆತ್ಮಹತ್ಯೆ

ಮಾನಸಿಕ ಒತ್ತಡ: ಉತ್ತರ ಪ್ರದೇಶದಲ್ಲಿ ನೀಟ್ ಆಕಾಂಕ್ಷಿ ಆತ್ಮಹತ್ಯೆ

ಖನೌ: 'ನೀಟ್‌-ಯುಜಿ' ಪರೀಕ್ಷಾ ಆಕಾಂಕ್ಷಿ ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಮಹಾರಾಜ್‌ಗಂಜ್‌ನಲ್ಲಿ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ನೀಟ್ ಪರೀಕ್ಷೆಯ ನಂತರ ಆಕೆ ಮಾನಸಿಕ ಒತ್ತಡದಲ್ಲಿದ್ದಳು ಎಂದು ಕುಟುಂಬದವರು ಆರೋಪಿಸಿದ್ದಾರೆ.

ಮೃತರನ್ನು ಚೌಪರಿಯಾ ಕಾಂಚನಪುರ ಗ್ರಾಮದ ನಿವಾಸಿ ಚಂಚಲ್ ಭಾರತಿ ಎಂದು ಗುರುತಿಸಲಾಗಿದೆ.

ಕುಟುಂಬದ ಪ್ರಕಾರ ಜೂನ್ 21ರಂದು ನಡೆದ ನೀಟ್-ಯುಜಿ ಮರುಪರೀಕ್ಷೆಯ ಬಳಿಕ ಮಗಳು ಮಾನಸಿಕವಾಗಿ ತೀವ್ರ ನೊಂದಿದ್ದರು ಎಂದು ಹೇಳಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಎಲ್ಲ ಆಯಾಮದಲ್ಲೂ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನೀಟ್ ಪರೀಕ್ಷೆ ದಿನವೇ ಕಾಂಗ್ರೆಸ್ ಸಮಾವೇಶ: ಸಂಸದ ಸೂರ್ಯ, ಸಚಿವ ಪ್ರಿಯಾಂಕ್ ಜಟಾಪಟಿನೀಟ್ ಮರುಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ವಿಡಿಯೊ ನಕಲಿ: ಎನ್‌ಟಿಎ
Dailyhunt
Disclaimer: This content has not been generated, created or edited by Dailyhunt. Publisher: Prajavani