Dailyhunt Logo
  • Light mode
    Follow system
    Dark mode
    • Play Story
    • App Story
ಮಾಯಕೊಂಡ ತಾಲ್ಲೂಕು ರಚನೆಗೆ ಪ್ರಾಮಾಣಿಕ ಪ್ರಯತ್ನ: ಸಚಿವ ಬಸವಂತಪ್ಪ

ಮಾಯಕೊಂಡ ತಾಲ್ಲೂಕು ರಚನೆಗೆ ಪ್ರಾಮಾಣಿಕ ಪ್ರಯತ್ನ: ಸಚಿವ ಬಸವಂತಪ್ಪ

ದಾವಣಗೆರೆ: 'ಮಾಯಕೊಂಡ ತಾಲ್ಲೂಕು ರಚನೆಯ ಬೇಡಿಕೆ ಬಹು ದಿನಗಳಿಂದ ನನೆಗುದಿಗೆ ಬಿದ್ದಿದೆ. ಸಚಿವನಾಗಿರುವ ಕಾರಣಕ್ಕೆ ಕ್ಷೇತ್ರದ ಜನರು ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಾಧಕ-ಬಾಧಕಗಳ ವರದಿ ಪಡೆದು, ಕೂಲಂಕಷವಾಗಿ ಪರಿಶೀಲಿಸಿ ಮುಖ್ಯಮಂತ್ರಿ ಜೊತೆಗೆ ಚರ್ಚಿಸುತ್ತೇನೆ.

ತಾಲ್ಲೂಕು ಮಾನ್ಯತೆ ಕಲ್ಪಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುವೆ' ಎಂದು ಮುಜರಾಯಿ, ಮೀನುಗಾರಿಕೆ, ಬಂದರು ಸಚಿವ ಕೆ.ಎಸ್‌. ಬಸವಂತಪ್ಪ ಭರವಸೆ ನೀಡಿದರು

'ಮಾಯಕೊಂಡ ಕ್ಷೇತ್ರ ವ್ಯಾಪ್ತಿಯ 22 ಕೆರೆಗಳನ್ನು ತುಂಬಿಸುವ ಯೋಜನೆಯನ್ನು ತಾಂತ್ರಿಕ ತೊಡಕಿನಿಂದ ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗಿಲ್ಲ. ಹೊಸ ಪೈಪ್‌ಲೈನ್‌ ನಿರ್ಮಾಣಕ್ಕೆ ಅಗತ್ಯ ಅನುದಾನ ಮಂಜೂರಾಗಿದೆ. ಟೆಂಡರ್‌ ಪ್ರಕ್ರಿಯೆ ನಡೆಯುತ್ತಿದ್ದು, ಶೀಘ್ರವೇ ಎಲ್ಲ ಕೆರೆಗಳನ್ನು ಭರ್ತಿ ಮಾಡಲಾಗುವುದು' ಎಂದು ಭಾನುವಾರ ಸುದ್ದಿಗಾರರಿಗೆ ತಿಳಿಸಿದರು.

'ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆಯ ನವೀಕರಣಕ್ಕೆ ಪ್ರಯತ್ನಗಳು ನಡೆಯು ತ್ತಿವೆ. ಸಾವಿರ ಹಾಸಿಗೆ ಸಾಮರ್ಥ್ಯದ ಹೊಸ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ ಸಿಕ್ಕಿದೆ. ವೈದ್ಯಕೀಯ ಸೇವೆಯಲ್ಲಿ ಸುಧಾರಣೆ ತರಲಾಗುವುದು' ಎಂದು ಮಾಹಿತಿ ನೀಡಿದರು.

'ಅಧಿಕಾರಿಗಳ ತಪ್ಪು ನಿರ್ಧಾರದಿಂದ ಎಂಆರ್‌ಐ ಸ್ಕ್ಯಾನಿಂಗ್‌ ಸೌಲಭ್ಯ ಜಿಲ್ಲೆಯ ಜನರ ಕೈತಪ್ಪಿದೆ. ನರರೋಗ ತಜ್ಞರು ಸೇರಿದಂತೆ ಅಗತ್ಯ ವೈದ್ಯಕೀಯ ಸೌಲಭ್ಯಗಳಿದ್ದರೂ ಎಂಆರ್‌ಐ ಸ್ಕ್ಯಾನಿಂಗ್‌ ವ್ಯವಸ್ಥೆ ಜಿಲ್ಲಾ ಆಸ್ಪತ್ರೆಯಲ್ಲಿ ಇಲ್ಲ. ಹೊಸ ಯಂತ್ರಕ್ಕೆ ಟೆಂಡರ್ ಪ್ರಕ್ರಿಯೆ ನಡೆಯುತ್ತಿದ್ದು, ಶೀಘ್ರ ಒದಗಿಸಲಾಗುವುದು' ಎಂದರು.

ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಆದ್ಯತೆ ಸಿಗಬೇಕು. ಹಾಸ್ಟೆಲ್‌ ಸೌಲಭ್ಯ ಎಲ್ಲರಿಗೂ ದೊರಕಬೇಕು. ಮೂಲಸೌಲಭ್ಯ ಕಲ್ಪಿಸಲು ಅಧಿಕಾರಿಗಳು ಒತ್ತು ನೀಡಬೇಕು ಕೆ.ಎಸ್‌.ಬಸವಂತಪ್ಪ, ಸಚಿವ

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260817-43-1708037776

Dailyhunt
Disclaimer: This content has not been generated, created or edited by Dailyhunt. Publisher: Prajavani