ಮೈಸೂರು: ನಂಜನಗೂಡು ತಾಲ್ಲೂಕಿನಲ್ಲಿ 2025ರಲ್ಲಿ ಅಣ್ಣನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ 40 ವರ್ಷದ ಅಪರಾಧಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ(ಪೊಕ್ಸೊ ವಿಶೇಷ ನ್ಯಾಯಾಲಯ) ಸೋಮವಾರ 25 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ನ್ಯಾಯಾಧೀಶ ಆನಂದ್ ಪಿ.
ಹೊಗಾಡೆ ಅಪರಾಧಿಗೆ 25 ವರ್ಷ ಜೈಲು ಶಿಕ್ಷೆ ಹಾಗೂ ₹25 ಸಾವಿರ ದಂಡ ವಿಧಿಸಿದರು. ದಂಡದ ಹಣವನ್ನು ಸಂತ್ರಸ್ತೆಗೆ ಪಾವತಿಸಬೇಕು ಎಂದು ಆದೇಶಿಸಿದ್ದಾರೆ. ಸರ್ಕಾರದ ಪರ ಕೆ.ಬಿ.ಜಯಂತಿ ವಾದ ಮಂಡಿಸಿದರು.

