Dailyhunt
ಮೈಸೂರು: ಬೈಕ್‌ಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಬೈಕ್ ಸವಾರ ಸಾವು

ಮೈಸೂರು: ಬೈಕ್‌ಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಬೈಕ್ ಸವಾರ ಸಾವು

ಮೈಸೂರು: ನಂಜನಗೂಡು ಊಟಿ ರಸ್ತೆಯ ಹೊಸಹಳ್ಳಿ ಗೇಟ್ ಬಳಿ ಬೈಕ್‌ಗೆ ಕಾರು ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ನಂಜನಗೂಡು ತಾಲ್ಲೂಕಿನ ಹುಣಸನಾಳು ಗ್ರಾಮದ ಮಹದೇವಶೆಟ್ಟಿ(50) ಮೃತರು.

ಹುಣಸನಾಳು ಗ್ರಾಮದಿಂದ ನಂಜನಗೂಡಿಗೆ ಸ್ಕೂಟರ್‌ನಲ್ಲಿ ಹೋಗುವ ವೇಳೆ ಅಪಘಾತ‌ ಸಂಭವಿಸಿದೆ. ವೇಗವಾಗಿ ಬರುತ್ತಿದ್ದ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ನಂಜನಗೂಡಿನ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Dailyhunt
Disclaimer: This content has not been generated, created or edited by Dailyhunt. Publisher: Prajavani