Dailyhunt Logo
  • Light mode
    Follow system
    Dark mode
    • Play Story
    • App Story
ಮಳವಳ್ಳಿ ಬೆಂಗಳೂರಿನ 6ನೇ ಹಂತದ ಕುಡಿಯುವ ನೀರಿನ ಯೋಜನೆ ಕೈಬಿಡಲು ಆಗ್ರಹ

ಮಳವಳ್ಳಿ ಬೆಂಗಳೂರಿನ 6ನೇ ಹಂತದ ಕುಡಿಯುವ ನೀರಿನ ಯೋಜನೆ ಕೈಬಿಡಲು ಆಗ್ರಹ

ಮಳವಳ್ಳಿ: ಬೆಂಗಳೂರಿನ 6ನೇ ಹಂತದ ಕುಡಿಯುವ ನೀರಿನ ಯೋಜನೆಯನ್ನು ಕೈಬಿಡುವಂತೆ ಆಗ್ರಹಿಸಿ ಹೋರಾಟ ರೂಪಿಸಲು ಜುಲೈ 4ರಂದು ಪಟ್ಟಣದಲ್ಲಿ ಪೂರ್ವಭಾವಿ ನಡೆಯಲಿದೆ.

ಪಟ್ಟಣದ ಕನಕಪುರ ರಸ್ತೆಯ ಕೆ.ಎನ್.ನಾಗೇಗೌಡ ಬಡಾವಣೆಯ ಶ್ರೀರಾಮ ಒಕ್ಕಲಿಗರ ಸಮುದಾಯ ಭವನದಲ್ಲಿ ಶನಿವಾರ ಬೆಳಿಗ್ಗೆ 10 ಗಂಟೆಗೆ ಸಂಪೂರ್ಣ ಸಾವಯವ ಕೃಷಿಕರ ಸಂಘದ ವತಿಯಿಂದ ಆಯೋಜಿಸಿರುವ ಸಭೆಯಲ್ಲಿ ವಿವಿಧ ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.

ಸಾರ್ವಜನಿಕರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗುವಂತೆ ಸಂಘದ ಅಧ್ಯಕ್ಷ ಎಂ.ಎನ್.ಮಹೇಶ್ ಕುಮಾರ್ ಮನವಿ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260704-40-1567625612

Dailyhunt
Disclaimer: This content has not been generated, created or edited by Dailyhunt. Publisher: Prajavani