Monday, 21 Sep, 12.26 pm ಪ್ರಜಾವಾಣಿ

ರಾಷ್ಟ್ರೀಯ
ಮಲಯಾಟ್ಟೂರ್ ಗಣಿಗಾರಿಕೆ ಪ್ರದೇಶದಲ್ಲಿ ಸ್ಫೋಟ; ಇಬ್ಬರು ವಲಸೆ ಕಾರ್ಮಿಕರು ಸಾವು

ಕೊಚ್ಚಿ: ಎರ್ನಾಕುಳಂ ಜಿಲ್ಲೆಯ ಕಾಲಡಿ ಸಮೀಪದ ಮಲಯಾಟ್ಟೂರಿನ ಗಣಿಗಾರಿಕೆ ಪ್ರದೇಶದ ಕಟ್ಟಡವೊಂದರಲ್ಲಿ ಸೋಮವಾರ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ.

ಸುಮಾರು ಬೆಳಿಗ್ಗೆ 3 ಗಂಟೆಗೆ ಅವಘಡ ಸಂಭವಿಸಿದೆ. ಅವಶೇಷಗಳಡಿಯಿಂದ ಶವಗಳನ್ನು ಹೊರ ತೆಗೆಯಲಾಗಿದೆ. ಈ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಮೃತದೇಹವನ್ನು ಅಂಗಮಾಲಿ ಆಸ್ಪತ್ರೆಯಲ್ಲಿರಿಸಲಾಗಿದೆ. ಸ್ಫೋಟಕ್ಕೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Prajavani
Top