ಮಸ್ಕಿ: ಪುರಸಭೆಯ 23ನೇ ವಾರ್ಡ್ ವ್ಯಾಪ್ತಿಯಲ್ಲಿ ಸಿ.ಎ ನಿವೇಶನದಲ್ಲಿದ್ದ ಸಾರ್ವಜನಿಕ ನೀರಿನ ಟ್ಯಾಂಕ್‌ಅನ್ನು ಖಾಸಗಿ ವ್ಯಕ್ತಿಯೊಬ್ಬರು ನೆಲಸಮಗೊಳಿಸಲು ಯತ್ನಿಸಿದ್ದು ಸ್ಥಳೀಯ ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ.
23ನೇ ವಾರ್ಡ್‌ನ ಸಿ.ಎ ಸೈಟ್‌ನಲ್ಲಿ ನಿವಾಸಿಗಳ ಕುಡಿಯುವ ನೀರಿನ ಅನುಕೂಲಕ್ಕಾಗಿ ಟ್ಯಾಂಕ್ ನಿರ್ಮಿಸಲಾಗಿತ್ತು.
ಆದರೆ, ಆ ಜಾಗದ ಮಾಲೀಕತ್ವದ ನೆಪವೊಡ್ಡಿ ಖಾಸಗಿ ವ್ಯಕ್ತಿಯೊಬ್ಬರು ಜೆಸಿಬಿ ಬಳಸಿ ಟ್ಯಾಂಕ್ ಸಂಪೂರ್ಣವಾಗಿ ನೆಲಸಮ ಮಾಡಲು ಮುಂದಾಗಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ತಡೆ ಹಿಡಿದಿದ್ದಾರೆ.
ಸಾರ್ವಜನಿಕ ಆಸ್ತಿ: ಸಿ.ಎ ಸೈಟ್‌ಗಳು ನಿಯಮಾವಳಿಗಳ ಪ್ರಕಾರ ಸಾರ್ವಜನಿಕ ಸೌಲಭ್ಯಗಳಿಗೆ ಮೀಸಲಾಗಿರುತ್ತವೆ. ಅಲ್ಲಿನ ಮೂಲಸೌಕರ್ಯವನ್ನು ಧ್ವಂಸಗೊಳಿಸಿರುವುದು ಕಾನೂನು ಬಾಹಿರ ಎಂಬುದು ನಾಗರಿಕರ ವಾದ.
ಸಾರ್ವಜನಿಕ ಆಸ್ತಿ ಹಾಳು ಮಾಡಲು ಯತ್ನಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದರೆ ಪುರಸಭೆ ಕಾರ್ಯಾಲಯದ ಮುಂದೆ ಪ್ರತಿಭಟನೆ ನಡೆಸುವುದಾಗಿ ನಾಗರಿಕರು ಎಚ್ಚರಿಸಿದ್ದಾರೆ.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260705-32-913029590

