ಲಕ್ಷ್ಮೇಶ್ವರ: ಇಲ್ಲಿಯ ಎಸ್‍ಎಂಜೆವಿಜಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಬುಧವಾರ ಪರಿಷ್ಕೃತ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಎಸ್.ಎಂ. ವಿರಕ್ತಮಠ ಮತದಾನದ ಮಹತ್ವ, ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳುವ ಅಗತ್ಯ ಹಾಗೂ ಪ್ರತಿಯೊಬ್ಬ ನಾಗರಿಕನ ಮತದಾನದ ಹಕ್ಕು ಮತ್ತು ಕರ್ತವ್ಯದ ಬಗ್ಗೆ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯರಾದ ಸರಸ್ವತಿ ಎನ್. ಹುಲ್ಲನ್ನವರ ಮಾತನಾಡಿ, 'ಯುವ ಮತದಾರರು ಪ್ರಜಾಪ್ರಭುತ್ವದ ಬಲವಾಗಿದ್ದು ಪ್ರತಿಯೊಬ್ಬರೂ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಾಯಿಸಿಕೊಂಡು ಜವಾಬ್ದಾರಿಯುತ ಮತದಾರರಾಗಬೇಕು. ಚುನಾವಣೆಯ ಸಂದರ್ಭದಲ್ಲಿ ಎಲ್ಲರೂ ತಪ್ಪದೇ ಮತದಾನ ಮಾಡಬೇಕು' ಎಂದು ತಿಳಿಸಿದರು.
ಎಸ್.ಬಿ. ಅಣ್ಣಿಗೇರಿ ಸ್ವಾಗತಿಸಿದರು. ಜಗದೀಶ ದ್ಯಾಮಣ್ಣವರ ಕಾರ್ಯಕ್ರಮ ನಿರೂಪಿಸಿದರು. ಜಗದೀಶ ಶಿರಹಟ್ಟಿ ವಂದಿಸಿದರು. ಅರ್ಪಣಾ ರಾಯ್ಕರ್, ನಾಗರಾಜ ಬಸಾಪುರ, ಲಿಂಗರಾಜ ಕುಂಬಾರ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಇದ್ದರು.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260704-23-426049568

