ಮಂಡ್ಯ: 2026-27ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಅಲೆಮಾರಿ/ ಅರೆ ಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಕೆ ಅವಧಿ ನ.30ರವರೆಗೂ ವಿಸ್ತರಿಸಲಾಗಿದೆ. ಪಿಯುಸಿ ಹೊರತುಪಡಿಸಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಹ ವಿದ್ಯಾರ್ಥಿಗಳು https://ssp.postmetric. karnataka. gov.in ಮೂಲಕ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ ದೂ: 80507 70004 ಸಂಪರ್ಕಿಸಬಹುದು.
261104-40-2138219498

