Dailyhunt Logo
  • Light mode
    Follow system
    Dark mode
    • Play Story
    • App Story
'ಮೀಸಲಾತಿ: ಸುಪ್ರೀಂ ಕೋರ್ಟ್‌ಗೆ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಲಿ'

'ಮೀಸಲಾತಿ: ಸುಪ್ರೀಂ ಕೋರ್ಟ್‌ಗೆ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಲಿ'

ಧಾರವಾಡ: 'ಮೀಸಲಾತಿ ಹೆಚ್ಚಿಸಿದ್ದ ರಾಜ್ಯ ಸರ್ಕಾರದ ತೀರ್ಮಾನವನ್ನು ಹೈಕೋರ್ಟ್‌ ರದ್ದುಪಡಿಸಿದೆ. ಈ ಬಗ್ಗೆ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಬೇಕು' ಎಂದು ಅಖಿಲ ಕರ್ನಾಟಕ ಡೋಹರ ಕಕ್ಕಯ್ಯ ಸಮಾಜ ಸಂಘದ ರಾಜ್ಯ ಘಟಕದ ಅಧ್ಯಕ್ಷ ಸಂತೋಷ ಸವಣೂರ ಒತ್ತಾಯಿಸಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವು ಮೀಸಲಾತಿ ಹೆಚ್ಚಿಸುವ ತೀರ್ಮಾನ ಕೈಗೊಂಡಿತ್ತು. ಮೀಸಲಾತಿ ಪ್ರಮಾಣವನ್ನು ಪರಿಶಿಷ್ಟ ಜಾತಿಯವರಿಗೆ (ಎಸ್‌ಸಿ) ಶೇ 15ರಿಂದ 17ಕ್ಕೆ ಹಾಗೂ ಪರಿಶಿಷ್ಟ ಪಂಗಡದವರಿಗೆ (ಎಸ್‌ಟಿ) ಶೇ 3ರಿಂದ ಶೇ 7ಕ್ಕೆ ಹೆಚ್ಚಿಸಿತ್ತು. ತಮಿಳುನಾಡಿನಲ್ಲಿ ಶೇ 68, ಛತ್ತೀಸಗಢದಲ್ಲಿ ಶೇ 56 ಮೀಸಲಾತಿ ಜಾರಿಯಲ್ಲಿದೆ' ಎಂದರು.

'ರಾಜ್ಯ ಸರ್ಕಾರವು ಎಸ್‌ಸಿಪಿ ಮತ್ತು ಟಿಎಸ್‌ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳಬಾರದು. ಆ ಅನುದಾನ ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಗಳಿಗೆ ಮಾತ್ರ ಬಳಕೆ ಮಾಡಬೇಕು. ಮಹಾನಗರ ಪಾಲಿಕೆಯಿಂದ ಎಸ್‌ಸಿ, ಎಸ್‌ಟಿ ಸಮುದಾಯಗಳ ಪಿಯುಸಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ನೀಡಬೇಕು' ಎಂದು ಒತ್ತಾಯಿಸಿದರು.

ರಾಜ್ಯ ಕಾಂಗ್ರೆಸ್ ಸರ್ಕಾರ ಎಸ್‌ಸಿ,ಎಸ್‌ಟಿ ಸಮುದಾಯ ಭವನ ನಿರ್ಮಾನಕ್ಕೆ ಅನುದಾನ ಒದಗಿಸಿಲ್ಲ ಎಂದು ದೂರಿದರು.

ಹಂಸವೇಣಿ ಎನ್‌, ಸಾರಿಕಾ ಎಸ್‌.ಸವಣೂರ, ಕವಿತಾ ತೇರದಾಳ, ರಾಮಚಂದ್ರ ಕೊದಡ್ಡಿ, ಸಂಗಮೇಶ ಇದ್ದರು.

261104-24-30573550

Dailyhunt
Disclaimer: This content has not been generated, created or edited by Dailyhunt. Publisher: Prajavani