Dailyhunt Logo
  • Light mode
    Follow system
    Dark mode
    • Play Story
    • App Story
ಮೋದಿಯ ವಾರಾಣಸಿ ಚುನಾವಣಾ ಫಲಿತಾಂಶ ರದ್ದು ಮಾಡುವಂತೆ ಕಾಂಗ್ರೆಸ್ ಕೂಗು: ಕಾರಣವೇನು?

ಮೋದಿಯ ವಾರಾಣಸಿ ಚುನಾವಣಾ ಫಲಿತಾಂಶ ರದ್ದು ಮಾಡುವಂತೆ ಕಾಂಗ್ರೆಸ್ ಕೂಗು: ಕಾರಣವೇನು?

ಲಖನೌ: ಪ್ರಧಾನಿ ನರೇಂದ್ರ ಮೋದಿ ಅವರು 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರತಿನಿಧಿಸಿದ್ದ ವಾರಾಣಸಿ ಕ್ಷೇತ್ರದ ಫಲಿತಾಂಶವನ್ನು ರದ್ದು ಮಾಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್‌ ನಾಯಕರು, ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದ್ದಾರೆ.

'ಮತ ಕಳ್ಳತನ'ದ ಪ್ರಯೋಜನ ಪಡೆದು ಮೋದಿ ಗೆದ್ದಿದ್ದಾರೆ ಎಂದು ಆರೋಪಿಸಿದ್ದಾರೆ.

ಜಿಲ್ಲಾ ಘಟಕದ ಅಧ್ಯಕ್ಷ ರಾಜೇಶ್ವರ್‌ ಸಿಂಗ್‌ ಪಟೇಲ್‌ ಹಾಗೂ ಮಹಾನಗರ ಕಾಂಗ್ರೆಸ್‌ ಸಮಿತಿ ಮುಖ್ಯಸ್ಥ ರಾಘವೇಂದ್ರ ಚೌಬೆ ಅವರ ನೇತೃತ್ವದಲ್ಲಿ ಜಮಾಯಿಸಿದ್ದ ನೂರಾರು ಕಾರ್ಯಕರ್ತರು, ಮರುಚುನಾವಣೆ ನಡೆಸಬೇಕು, ಚುನಾವಣಾ ಅಕ್ರಮವನ್ನು ಬಯಲಿಗೆಳೆಯಲು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ನಗರದಲ್ಲಿರುವ ಡಾ.ಬಿ.ಆರ್‌. ಅಂಬೇಡ್ಕರ್‌ ಪ್ರತಿಮೆ ಎದುರು ಜಮಾಯಿಸಿ, ಚುನಾವಣಾ ಆಯೋಗ (ಇಸಿ) ವಿರುದ್ಧ ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು, ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆ ನಡೆಸಿದರು.

'2024ರ ವಾರಾಣಸಿ ಲೋಕಸಭಾ ಚುನಾವಣೆಯಲ್ಲಿ ಭಾರಿ ಅಕ್ರಮಗಳು ನಡೆದಿವೆ. ಚುನಾವಣಾ ಫಲಿತಾಂಶವನ್ನು ರದ್ದು ಮಾಡಿ ಮರುಮತದಾನ ನಡೆಸಬೇಕು. ನ್ಯಾಯಸಮ್ಮತವಾದ ತನಿಖೆ ನಡೆಯಬೇಕು ಎಂದು ಒತ್ತಾಯಿಸುತ್ತೇವೆ' ಎಂಬುದಾಗಿ ಪಟೇಲ್‌ ಹೇಳಿದ್ದಾರೆ.

ಸಂಕ್ಷಿಪ್ತ ಮಾಹಿತಿ - ಪೂರ್ಣ ವಿವರಣೆಗೆ ಕ್ಲಿಕ್ ಮಾಡಿಪ್ರಮುಖ ಮುಖ್ಯಾಂಶಗಳ ಸಂಕ್ಷಿಪ್ತ ಸಾರಾಂಶ


ಮೋದಿಯ ವಾರಾಣಸಿ ಚುನಾವಣಾ ಫಲಿತಾಂಶ ರದ್ದು ಮಾಡುವಂತೆ ಕಾಂಗ್ರೆಸ್ ಕೂಗು: ಕಾರಣವೇನು?

ಒಂದು ಸಾಲಿನಲ್ಲಿವಾರಾಣಸಿ ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷವು ಮರುಚುನಾವಣೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದೆ.

ಏನು? ಏಕೆ? ಹೇಗೆ?


ವಾರಾಣಸಿ ಚುನಾವಣಾ ಫಲಿತಾಂಶ ರದ್ದುಗೊಳಿಸಬೇಕೆಂದು ಕಾಂಗ್ರೆಸ್ ಏಕೆ ಒತ್ತಾಯಿಸುತ್ತಿದೆ?

2024ರ ವಾರಾಣಸಿ ಲೋಕಸಭಾ ಚುನಾವಣೆಯಲ್ಲಿ ಮತ ಕಳ್ಳತನದಂತಹ ಭಾರಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಫಲಿತಾಂಶ ರದ್ದುಪಡಿಸಿ ಮರುಚುನಾವಣೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.


ಕಾಂಗ್ರೆಸ್ ಪ್ರತಿಭಟನೆಯಲ್ಲಿ ಯಾರ ನೇತೃತ್ವ ವಹಿಸಿದ್ದರು?

ಜಿಲ್ಲಾ ಘಟಕದ ಅಧ್ಯಕ್ಷ ರಾಜೇಶ್ವರ್‌ ಸಿಂಗ್‌ ಪಟೇಲ್‌ ಹಾಗೂ ಮಹಾನಗರ ಕಾಂಗ್ರೆಸ್‌ ಸಮಿತಿ ಮುಖ್ಯಸ್ಥ ರಾಘವೇಂದ್ರ ಚೌಬೆ ಅವರ ನೇತೃತ್ವದಲ್ಲಿ ಲಖನೌನಲ್ಲಿ ಪ್ರತಿಭಟನೆ ನಡೆಸಲಾಯಿತು.


ಆಗ್ರಾದಲ್ಲಿ ನಡೆದ ಪ್ರತಿಭಟನೆಯ ಹಿನ್ನೆಲೆ ಏನು?

ಆಗ್ರಾದಲ್ಲಿರುವ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ನಿವಾಸದ ಎದುರು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಅವರ ನಿವಾಸದ ಬಾಗಿಲಿಗೆ ಕಪ್ಪು ಬಣ್ಣ ಬಳಿದು ರಾಜೀನಾಮೆಗೆ ಆಗ್ರಹಿಸಿದರು.


ಚುನಾವಣಾ ಆಯುಕ್ತರ ವಿರುದ್ಧ ಕಾಂಗ್ರೆಸ್ ಹೊಂದಿರುವ ಆಕ್ಷೇಪಣೆಗಳೇನು?

ಮತದಾರರ ಪಟ್ಟಿಯ ಪರಿಷ್ಕರಣೆ ಸೇರಿದಂತೆ ವಿವಿಧ ನಿರ್ಧಾರಗಳನ್ನು ಜ್ಞಾನೇಶ್ ಕುಮಾರ್ ಏಕಪಕ್ಷೀಯವಾಗಿ ತೆಗೆದುಕೊಂಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಈ ಪ್ರತಿಭಟನೆ ನಡೆಸಿದೆ.


ಮೋದಿಯವರ ಗೆಲುವಿನ ಅಂತರ ಕಳೆದ ಮೂರು ಚುನಾವಣೆಗಳಲ್ಲಿ ಹೇಗೆ ಬದಲಾಗಿದೆ?

2014 ಮತ್ತು 2019ರಲ್ಲಿ ಲಕ್ಷಾಂತರ ಮತಗಳ ಅಂತರದಿಂದ ಗೆದ್ದಿದ್ದ ಮೋದಿ ಅವರಿಗೆ, 2024ರ ಚುನಾವಣೆಯಲ್ಲಿ ಗೆಲುವಿನ ಅಂತರ ಗಣನೀಯವಾಗಿ ಕುಸಿದು 1.52 ಲಕ್ಷ ಮತಗಳಿಗೆ ತಲುಪಿದೆ.

ಎಐ ಬಳಸಿ ಸಂಸ್ಕರಿಸಲಾಗಿದೆ. ಪಿವಿ ಡಿಜಿಟಲ್ ತಂಡ ಪರಿಶೀಲಿಸಿದೆ

ಜ್ಞಾನೇಶ್ ನಿವಾಸದ ಎದುರೂ ಪ್ರತಿಭಟನೆ
ವಾರಾಣಸಿಯಲ್ಲಿ ಮಾತ್ರವಲ್ಲ, ಅದೇ ಸಂದರ್ಭದಲ್ಲಿ ಆಗ್ರಾದಲ್ಲಿಯೂ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟಿಸಿದ್ದಾರೆ.

ಆಗ್ರಾದ ವಿಜಯನಗರ ಪ್ರದೇಶದಲ್ಲಿ ಇರುವ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್‌ ಅವರ ನಿವಾಸದ ಎದುರು ಜಮಾಯಿಸಿ, ಮನೆಯ ಮುಖ್ಯ ದ್ವಾರಕ್ಕೆ ಕಪ್ಪು ಬಣ್ಣ ಬಳಿದು ಆಕ್ರೋಶ ಹೊರಹಾಕಿದ್ದಾರೆ. ಜ್ಞಾನೇಶ್‌ ಕುಮಾರ್‌ ಅವರು ಸಿಇಸಿ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪ್ರತಿಭಟನಾಕಾರರನ್ನು ಜಾಗ ಖಾಲಿ ಮಾಡಿಸಿದ್ದಾರೆ. ನಿವಾಸದ ದ್ವಾರ ಸ್ವಚ್ಛಗೊಳಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ನಿವಾಸದ ಹೊರಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ಕಾಂಗ್ರೆಸ್‌ ಆಕ್ರೋಶವೇಕೆ?
ದೇಶದಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ವಿಚಾರವಾಗಿ ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್ ಸಂಧು, ವಿವೇಕ್‌ ಜೋಶಿ ಅವರು ಆಕ್ಷೇಪಣೆಗಳನ್ನು ಎತ್ತಿದ್ದಾರೆ. ಜ್ಞಾನೇಶ್‌ ಕುಮಾರ್ ಅವರು ಏಕಪಕ್ಷೀಯವಾಗಿ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ ಎಂಬುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.

ಇದರ ಬೆನ್ನಲ್ಲೇ, ಜ್ಞಾನೇಶ್‌ ಕುಮಾರ್ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆಗೆ ಇಳಿದಿದೆ. ದೇಶದಾದ್ಯಂತ ಎಸ್‌ಐಆರ್ ಹಾಗೂ ವಿವಿಧ ರಾಜ್ಯಗಳ ಚುನಾವಣೆಗಳಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ರಾಜೀನಾಮೆಗೆ ಆಗ್ರಹಿಸುತ್ತಿದೆ.

ವಾರಾಣಸಿ ಫಲಿತಾಂಶ
ಪ್ರಧಾನಿ ಮೋದಿ ಅವರು ವಾರಾಣಸಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಜಯ ಸಾಧಿಸಿದ್ದಾರೆ. 2014ರಲ್ಲಿ ಸಮೀಪದ ಸ್ಪರ್ಧಿಯಾಗಿದ್ದ ಆಮ್‌ ಆದ್ಮಿ ಪಕ್ಷದ (ಎಎಪಿ) ಅರವಿಂದ ಕೇಜ್ರಿವಾಲ್‌ ವಿರುದ್ಧ 3.71 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದಿದ್ದ ಅವರು, 2019ರಲ್ಲಿ ಸಮಾಜವಾದಿ ಪಕ್ಷದ ಶಾಲಿನಿ ಯಾದವ್‌ ವಿರುದ್ಧ 4.79 ಲಕ್ಷ ಮತಗಳ ಅಂತರದಿಂದ ಜಯಿಸಿದ್ದರು.

ಆದರೆ, 2024ರಲ್ಲಿ ಜಯದ ಅಂತರ ಗಣನೀಯ ಪ್ರಮಾಣದಲ್ಲಿ ಕುಸಿದಿದೆ. ಕಾಂಗ್ರೆಸ್‌ ಅಜಯ್‌ ರಾಯ್‌ ಎದುರು 1.52 ಲಕ್ಷ ಮತಗಳಿಂದ ಜಯ ಸಾಧಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Prajavani