Dailyhunt Logo
  • Light mode
    Follow system
    Dark mode
    • Play Story
    • App Story
ಮೋದಿಯ ವಾರಾಣಸಿಯಲ್ಲಿ 'ಕಾಕ್ರೋಚ್', ವಾಂಗ್ಚೂಕ್‌ಗೆ ಬೆಂಬಲ; ವಿದ್ಯಾರ್ಥಿಗಳ ಧರಣಿ

ಮೋದಿಯ ವಾರಾಣಸಿಯಲ್ಲಿ 'ಕಾಕ್ರೋಚ್', ವಾಂಗ್ಚೂಕ್‌ಗೆ ಬೆಂಬಲ; ವಿದ್ಯಾರ್ಥಿಗಳ ಧರಣಿ

ಸಂಕ್ಷಿಪ್ತ ಮಾಹಿತಿ - ಪೂರ್ಣ ವಿವರಣೆಗೆ ಕ್ಲಿಕ್ ಮಾಡಿಪ್ರಮುಖ ಮುಖ್ಯಾಂಶಗಳ ಸಂಕ್ಷಿಪ್ತ ಸಾರಾಂಶ

ಮೋದಿಯ ವಾರಾಣಸಿಯಲ್ಲಿ 'ಕಾಕ್ರೋಚ್', ವಾಂಗ್ಚೂಕ್‌ಗೆ ಬೆಂಬಲಿಸಿ ಬೀದಿಗಿಳಿದ ವಿದ್ಯಾರ್ಥಿಗಳು

ಒಂದು ಸಾಲಿನಲ್ಲಿಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸೊನಮ್ ವಾಂಗ್ಚೂಕ್ ಬೆಂಬಲಕ್ಕಾಗಿ ವಾರಾಣಸಿಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಸರ್ಕಾರಿ ಶಿಕ್ಷಣ ವ್ಯವಸ್ಥೆಯ ವೈಫಲ್ಯವನ್ನು ಖಂಡಿಸಿದ್ದಾರೆ.

ಪ್ರಮುಖ ಪ್ರಶ್ನೋತ್ತರ


ವಾರಾಣಸಿಯಲ್ಲಿ ನಡೆದ ಪ್ರತಿಭಟನೆಯ ಉದ್ದೇಶವೇನು?

ನೀಟ್-2026 ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ವಿವಿಧ ಪರೀಕ್ಷೆಗಳಲ್ಲಿನ ಲೋಪಗಳನ್ನು ಖಂಡಿಸಿ ವಿದ್ಯಾರ್ಥಿಗಳು ವಾರಾಣಸಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.


ಪ್ರತಿಭಟನಾಕಾರರು ಯಾವ ಪಕ್ಷವನ್ನು ಬೆಂಬಲಿಸುತ್ತಿದ್ದಾರೆ?

ವಿದ್ಯಾರ್ಥಿಗಳು 'ಕಾಕ್ರೋಚ್ ಜನತಾ ಪಕ್ಷ' (CJP) ವನ್ನು ಬೆಂಬಲಿಸುತ್ತಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ.


ಸೊನಮ್ ವಾಂಗ್ಚೂಕ್ ಪರ ನಡೆದ ಹೋರಾಟ ಯಾವುದು?

ಪರಿಸರ ಹೋರಾಟಗಾರ ಸೊನಮ್ ವಾಂಗ್ಚೂಕ್ ಅವರಿಗೆ ಬೆಂಬಲ ಸೂಚಿಸಿದ್ದಕ್ಕಾಗಿ ಬರ್ಹೈಚ್ ನ ವೈದ್ಯ ರೂಪಕ್ ಇಖೆ ಅವರನ್ನು ಅಮಾನತುಗೊಳಿಸಲಾಗಿದ್ದು, ಇದನ್ನು ವಿದ್ಯಾರ್ಥಿಗಳು ಖಂಡಿಸಿದ್ದಾರೆ.


ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರಮುಖ ವ್ಯಕ್ತಿಗಳು ಯಾರು?

ಸಾಮಾಜಿಕ ಕಾರ್ಯಕರ್ತ ಯೋಗೇಂದ್ರ ಯಾದವ್ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಸರ್ಕಾರವು ಯುವಕರಿಗೆ ಉದ್ಯೋಗ ನೀಡುವಲ್ಲಿ ವಿಫಲವಾಗಿದೆ ಎಂದು ಟೀಕಿಸಿದ್ದಾರೆ.


ದೆಹಲಿಯಲ್ಲಿ ಪ್ರತಿಭಟನಾಕಾರರ ಮೇಲೆ ನಡೆದ ಕ್ರಮವೇನು?

ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸಿಜೆಪಿ ಕಾರ್ಯಕರ್ತರನ್ನು ಚದುರಿಸಲು ದೆಹಲಿ ಪೊಲೀಸರು ಲಾಠಿ ಪ್ರಹಾರ ನಡೆಸಿದರು ಮತ್ತು ಅಶ್ರುವಾಯು ಪ್ರಯೋಗಿಸಿದರು.

ಪ್ರಮುಖ ಅಂಕಿಅಂಶಗಳು

ಜೂನ್ 20ಕಾಕ್ರೋಚ್ ಜನತಾ ಪಕ್ಷ ಪ್ರತಿಭಟನೆ ಆರಂಭಿಸಿದ ದಿನಾಂಕ

ಎಐ ಬಳಸಿ ಸಂಸ್ಕರಿಸಲಾಗಿದೆ. ಪಿವಿ ಡಿಜಿಟಲ್ ತಂಡ ಪರಿಶೀಲಿಸಿದೆ

ಲಖನೌ: ‍ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರತಿನಿಧಿಸುವ ಲೋಕಸಭಾ ಕ್ಷೇತ್ರ ವಾರಾಣಸಿಯಲ್ಲಿ ನೂರಾರು ವಿದ್ಯಾರ್ಥಿಗಳು ಕಾಕ್ರೋಚ್‌ ಜನತಾ ಪಕ್ಷವನ್ನು (ಸಿಜೆಪಿ) ಬೆಂಬಲಿಸಿ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ.

ಪರಿಸರ ಹೋರಾಟಗಾರ ಸೊನಮ್‌ ವಾಂಗ್ಚೂಕ್‌ ಅವರನ್ನು ಬೆಂಬಲಿಸಿ ಏಕಾಂಗಿಯಾಗಿ ಪ್ರತಿಭಟಿಸಿದ್ದ ಬರ್ಹೈಚ್‌ ಪಟ್ಟಣದ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ವೈದ್ಯರೊಬ್ಬರನ್ನು ಇತ್ತೀಚೆಗೆ ಅಮಾನತು ಮಾಡಲಾಗಿತ್ತು. ಆದರೂ, ವಿದ್ಯಾರ್ಥಿಗಳು ಧೃತಿಗೆಡದೆ ಬೀದಿಗಿಳಿದಿದ್ದಾರೆ.

ನೀಟ್‌-2026 ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ವಿವಿಧ ಪರೀಕ್ಷೆಗಳ ಸಂದರ್ಭದಲ್ಲಿ ವರದಿಯಾದ ಲೋಪವನ್ನು ಖಂಡಿಸಿ, ದೆಹಲಿಯ ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಸಿಜೆಪಿ, ಕೇಂದ್ರ ಶಿಕ್ಷಣ ಸಚಿವ ಧರ್ಮೆಂದ್ರ ಪ್ರಧಾನ್‌ ವಜಾಕ್ಕೆ ಆಗ್ರಹಿಸಿದೆ. ಈ ಹೋರಾಟಕ್ಕೆ ಬೆಂಬಲ ಸೂಚಿಸಿ, ಬನಾರಸ್‌ ಹಿಂದೂ ವಿಶ್ವವಿದ್ಯಾಲಯ ಮತ್ತು ಮಹಾತ್ಮ ಗಾಂಧಿ ಕಾಶಿ ವಿದ್ಯಾಪೀಠದ ವಿದ್ಯಾರ್ಥಿಗಳು ತರಗತಿಯನ್ನು ಬಹಿಷ್ಕರಿಸಿ, ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೆರವಣಿಗೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ, ವಿಶ್ವವಿದ್ಯಾಲಯ ಹಾಗೂ ವಿದ್ಯಾಪೀಠದ ಸುತ್ತಲೂ ಬಿಗಿ ಭದ್ರತೆ ಕಲ್ಪಿಸಲಾಗಿತ್ತು. ವಿದ್ಯಾರ್ಥಿಗಳ ಸಮಾವೇಶದಲ್ಲಿ ಪಾಲ್ಗೊಂಡ ಸಾಮಾಜಿಕ ಕಾರ್ಯಕರ್ತ ಯೋಗೇಂದ್ರ ಯಾದವ್, 'ಸರ್ಕಾರವು ಯುವಕರಿಗೆ ಉದ್ಯೋಗ ನೀಡುವಲ್ಲಿ ವಿಫಲವಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆಯಂತಹ ಘಟನೆಗಳಿಂದಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ಮೇಲಿನ ವಿಶ್ವಾಸಾರ್ಹತೆಯೂ ಕುಸಿದಿದೆ' ಎಂದಿದ್ದಾರೆ.

'ಪ್ರಧಾನ್‌ ಅವರು, ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ 'ನೈತಿಕ ಹೊಣೆ' ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಸೋರಿಕೆಗೆ ಕಾರಣವಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು' ಎಂದು ಒತ್ತಾಯಿಸಿದ್ದಾರೆ.

ಜೂನ್‌ 20ರಿಂದ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಸಿಜೆಪಿ, ಇಂದು 'ಸಂಸತ್‌ ಚಲೊ' ಆಯೋಜಿಸಿತ್ತು. ಪ್ರತಿಭಟನಾಕಾರರನ್ನು ಚದುರಿಸಲು ದೆಹಲಿ ಪೊಲೀಸರು ಲಾಠಿ ಬೀಸಿದ್ದಾರೆ. ಅಶ್ರುವಾಯು ಶೆಲ್‌ಗಳನ್ನೂ ಪ್ರಯೋಗಿಸಿದ್ದಾರೆ.

ವೈದ್ಯರ ಅಮಾನತು
ಸಿಜೆಪಿ ಪ್ರತಿಭಟನೆಯಲ್ಲಿ ಪಾಲ್ಗೊಂಡು ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ವಾಂಗ್ಚೂಕ್‌ ಅವರನ್ನು ಬೆಂಬಲಿಸಿ, ಬರ್ಹೈಚ್‌ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ವೈದ್ಯ ರೂಪಕ್ ಇಖೆ ಎಂಬವರು ಏಕಾಂಗಿಯಾಗಿ ಪ್ರತಿಭಟನಾ ಮೆರವಣಿಗೆ ನಡೆಸಿದ್ದರು. ಮಹಾರಾಷ್ಟ್ರ ಮೂಲದ ಅವರನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಇಖೆ ಅವರ ನಡೆಯನ್ನು ಅಶಿಸ್ತಿನ ಕೃತ್ಯ ಎಂದು ಆರೋಪಿಸಿ, ತನಿಖೆಗೆ ಸಮಿತಿಯನ್ನೂ ರಚಿಸಲಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Prajavani