Dailyhunt Logo
  • Light mode
    Follow system
    Dark mode
    • Play Story
    • App Story
ಮೊಹಿಸಿನ್‌ ವಿರುದ್ಧ ಶಿಸ್ತುಕ್ರಮ: ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ಮೊಹಿಸಿನ್‌ ವಿರುದ್ಧ ಶಿಸ್ತುಕ್ರಮ: ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ವದೆಹಲಿ: ಸಹಾಯಕ ಪ್ರಾಧ್ಯಾಪಕ ಡಾ. ಅಶ್ವಿನ್ ಹೆಬ್ಬಾರ್ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ಶಿವಮೊಗ್ಗ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಸಿಮ್ಸ್‌) ನಿರ್ದೇಶಕರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿದೆ.

ಆದಾಗ್ಯೂ, ಈ ಮಧ್ಯಂತರ ಆದೇಶವು ಡಾ.ಅಶ್ವಿನ್‌ ಅವರಿಗೆ ಅನ್ವಯವಾಗುವುದಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

ಆಗಸ್ಟ್ 4ರಂದು ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ದೀಪಂಕರ್ ದತ್ತ ಮತ್ತು ಶೀಲ್ ನಾಗು ಅವರಿದ್ದ ಪೀಠವು ಈ ಆದೇಶ ನೀಡಿದೆ.

ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್‌ ಮೊಹಿಸಿನ್‌ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರದ ಸಿಬ್ಬಂದಿ ಮತ್ತು ತರಬೇತಿ ಸಚಿವಾಲಯ ಹಾಗೂ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿತ್ತು. ಅಲ್ಲದೇ, ಸಿಮ್ಸ್‌ ನಿರ್ದೇಶಕ ಡಾ.ವಿರೂಪಾಕ್ಷಪ್ಪ ವಿರುದ್ಧ ಇಲಾಖಾ ವಿಚಾರಣೆ ಪ್ರಾರಂಭಿಸುವಂತೆಯೂ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು.

ಸಿಮ್ಸ್ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಡಾ.ಅಶ್ವಿನ್‌ ಅವರಿಗೆ ಸಂಬಂಧಿಸಿದಂತೆ ಆಡಳಿತಾತ್ಮಕ ಆದೇಶಗಳನ್ನು ನೀಡಿದ್ದಕ್ಕಾಗಿ ಇಬ್ಬರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್‌ ನಿರ್ದೇಶನ ನೀಡಿತ್ತು.

Dailyhunt
Disclaimer: This content has not been generated, created or edited by Dailyhunt. Publisher: Prajavani