Dailyhunt Logo
  • Light mode
    Follow system
    Dark mode
    • Play Story
    • App Story
ಮುಧೋಳ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 50ನೇ ವಾರ್ಷಿಕ ಮಹಾಸಭೆ

ಮುಧೋಳ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 50ನೇ ವಾರ್ಷಿಕ ಮಹಾಸಭೆ

ಕಮಲನಗರ: ತಾಲ್ಲೂಕಿನ ಮುಧೋಳ(ಬಿ) ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 50ನೇ ವಾರ್ಷಿಕ ಮಹಾಸಭೆ ಈಚೆಗೆ ಜರುಗಿತು.

ಪಿಕೆಪಿಎಸ್ ಅಧ್ಯಕ್ಷ ಗುರುನಾಥ ವಟಗೆ ಮಾತನಾಡಿ, 'ಸಂಘವು ಕಳೆದ 50 ವರ್ಷಗಳಿಂದ ಗ್ರಾಮದ ರೈತ ಬಾಂಧವರ ಮತ್ತು ಷೇರುದಾರರ ಹಿತರಕ್ಷಣೆಗೆ ಬದ್ಧವಾಗಿ ಕಾರ್ಯನಿರ್ವಹಿಸುತ್ತಾ ಬಂದಿದೆ.

ಸುವರ್ಣ ಮಹೋತ್ಸವದ ಈ ಐತಿಹಾಸಿಕ ಘಟ್ಟದಲ್ಲಿ ಸಂಘವು ಉತ್ತಮ ಪ್ರಗತಿ ಸಾಧಿಸಿದ್ದು, ರೈತರಿಗೆ ಸಕಾಲದಲ್ಲಿ ಸಾಲ ಸೌಲಭ್ಯ ಹಾಗೂ ಕೃಷಿ ಪರಿಕರಗಳನ್ನು ಒದಗಿಸುವಲ್ಲಿ ಯಶಸ್ವಿಯಾಗಿದೆ. ಸಂಸ್ಥೆಯ ಮತ್ತಷ್ಟು ಅಭಿವೃದ್ಧಿಗೆ ಎಲ್ಲ ಸದಸ್ಯರ ಸಹಕಾರ ಅಗತ್ಯ' ಎಂದು ತಿಳಿಸಿದರು.

ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಸ್ವಾಮಿ ಮಾತನಾಡಿ, 'ಕಳೆದ ಸಾಲಿನ ಜಮಾ-ಖರ್ಚಿನ ಲೆಕ್ಕ-ಪತ್ರ, ಲಾಭ-ನಷ್ಟದ ವಿವರ ಹಾಗೂ ಮುಂಬರುವ ವರ್ಷದ ಅಂದಾಜು ಅಯವ್ಯಯ ಮಂಡಿಸಿದರು. ಪ್ರಸಕ್ತ ಸಾಲಿನಲ್ಲಿ 2025-26 ನೇ ಸಾಲಿನಲ್ಲಿ ₹5,26,680 ನಿವ್ವಳ ಲಾಭ ಗಳಿಸಿದೆ. ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಬೆಳೆ ಸಾಲ ವಿತರಣೆ, ರಸಗೊಬ್ಬರ, ಬಿತ್ತನೆ ಬೀಜ ಪೂರೈಕೆ ಮತ್ತು ಸಂಘದ ಹೊಸ ಯೋಜನೆಗಳ ಕುರಿತು ಮುಕ್ತವಾಗಿ ಚರ್ಚಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷರು, ಆಡಳಿತ ಮಂಡಳಿಯ ಎಲ್ಲಾ ನಿರ್ದೇಶಕರು, ಮುಖಂಡರು, ಬ್ಯಾಂಕ್ ಮೇಲ್ವಿಚಾರಕರು, ಕೃಷಿ ಅಧಿಕಾರಿ, ಸಿಬ್ಬಂದಿ ಹಾಗೂ ಗ್ರಾಮದ ನೂರಾರು ರೈತ ಷೇರುದಾರರು ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.

ಸಂಘದ 50ನೇ ವಾರ್ಷಿಕೋತ್ಸವದ ಸವಿನೆಪಿಗಾಗಿ ಸಂಸ್ಥೆಯ ಬೆಳವಣಿಗೆಗೆ ಶ್ರಮಿಸಿದ ಹಿರಿಯ ಹಿತೈಷಿಗಳನ್ನು ಹಾಗೂ ಸಕಾಲದಲ್ಲಿ ಸಾಲ ಮರುಪಾವತಿಸಿದ ಪ್ರಗತಿಪರ ರೈತರನ್ನು ಅಲ್ಲದೇ ರೈತರ ಪ್ರತಿಭಾವಂತ ಮಕ್ಕಳನ್ನು ಸನ್ಮಾನಿಸಿ ನಗದು ಬಹುಮಾನ ನೀಡಿದರು.

260928-33-162479457

Dailyhunt
Disclaimer: This content has not been generated, created or edited by Dailyhunt. Publisher: Prajavani