ಬಾಲಿವುಡ್ ಖ್ಯಾತ ನಿರ್ದೇಶಕ ನಿತೇಶ್ ತಿವಾರಿ ನಿರ್ದೇಶನದ 'ರಾಮಾಯಣ' ಸಿನಿಮಾ ಟ್ರೇಲರ್ ಬಿಡುಗಡೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. ರಾಮಾಯಣ ಟ್ರೇಲರ್ ವೀಕ್ಷಿಸಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಜುಲೈ 24 ಬಿಡುಗಡೆಯಾಗಬೇಕಿದ್ದ ಚಿತ್ರದ ಟ್ರೇಲರ್ ಕೊನೆಯ ಕ್ಷಣದಲ್ಲಿ ಮುಂದೂಡಲಾಗಿತ್ತು.
ಈ ಕುರಿತು ನಿರ್ಮಾಪಕ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದ್ದರು.
ಇದೀಗ ಸಿನಿಮಾದ ಟ್ರೇಲರ್ ಬಿಡುಗಡೆಯ ಅಧಿಕೃತ ದಿನಾಂಕ ಹಾಗೂ ಸಮಯವನ್ನು ನಿರ್ಮಾಪಕ ನಮಿತ್ ಮಲ್ಹೋತ್ರಾ ಪ್ರಕಟಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಚಿತ್ರದ ಹೊಸ ಪೋಸ್ಟರ್ ಹಂಚಿಕೊಳ್ಳಲಾಗಿದ್ದು, ಪವಿತ್ರ ಬ್ರಾಹ್ಮಿ ಮುಹೂರ್ತದಲ್ಲಿ ಟ್ರೇಲರ್ ಜಾಗತಿಕವಾಗಿ ಅನಾವರಣಗೊಳ್ಳಲಿದೆ.
'ರಾಮಾಯಣ' ಚಿತ್ರದ ಟ್ರೇಲರ್ ಬಿಡುಗಡೆ ಮುಂದೂಡಿಕೆ: ನಿರ್ಮಾಪಕ ನಮಿತ್ ಹೇಳಿದ್ದಿಷ್ಟು'ರಾಮಾಯಣ'ದ ಸೀತೆ ಪಾತ್ರದ ಬಗ್ಗೆ ಮನದಾಳ ಹಂಚಿಕೊಂಡ ನಟಿ ಸಾಯಿ ಪಲ್ಲವಿಟ್ರೇಲರ್ ರಿಲೀಸ್ ಪೋಸ್ಟರ್‌ನಲ್ಲೇನಿದೆ?
'ಶುಭ ಬ್ರಾಹ್ಮಿ ಮುಹೂರ್ತದಲ್ಲಿ ಜುಲೈ 30ರಂದು ಗುರುವಾರ ಮುಂಜಾನೆ 4:15ಕ್ಕೆ ನಮ್ಮ 'ರಾಮಾಯಣ' ಚಿತ್ರದ ಟ್ರೇಲರ್ ಅನ್ನು ಇಡೀ ಜಗತ್ತಿನಾದ್ಯಂತ ಅನಾವರಣಗೊಳಿಸುವ ಮೂಲಕ ಹೊಸ ಅಧ್ಯಾಯಕ್ಕೆ ನಾಂದಿ ಹಾಡುತ್ತಿದ್ದೇವೆ' ಎಂದು ಬರೆಯಲಾಗಿದೆ.

ದೊಡ್ಡ ತಾರಾಗಣದ ಸಿನಿಮಾ
ನಿತೇಶ್ ತಿವಾರಿ ಅವರ 'ರಾಮಾಯಣ' ಸಿನಿಮಾದಲ್ಲಿ ರಣಬೀರ್ ಕಪೂರ್ ಶ್ರೀರಾಮನಾಗಿ ನಟಿಸುತ್ತಿದ್ದರೆ, ಸಾಯಿ ಪಲ್ಲವಿ ಸೀತಾ ದೇವಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ರಾವಣನ ಪಾತ್ರದಲ್ಲಿ ಯಶ್ ಹಾಗೂ ಹನುಮಂತನ ಪಾತ್ರದಲ್ಲಿ ಸನ್ನಿ ಡಿಯೋಲ್ ನಟಿಸುತ್ತಿದ್ದಾರೆ. ಉಳಿದಂತೆ ಲಕ್ಷ್ಮಣನಾಗಿ ರವಿ ದುಬೆ, ಕೈಕೇಯಿಯಾಗಿ ಲಾರಾ ದತ್ತಾ, ಶೂರ್ಪನಖಿಯಾಗಿ ರಕುಲ್ ಪ್ರೀತ್ ಸಿಂಗ್, ಮಂಡೋದರಿಯಾಗಿ ಕಾಜಲ್ ಅಗರ್ವಾಲ್ ಮತ್ತು ದಶರಥ ಮಹಾರಾಜನಾಗಿ ಅರುಣ್ ಗೋವಿಲ್ ನಟಿಸುತ್ತಿದ್ದಾರೆ. ವಿವೇಕ್ ಒಬೆರಾಯ್, ಕುನಾಲ್ ಕಪೂರ್, ಆದಿನಾಥ್ ಕೊಠಾರೆ ಮತ್ತು ಮೋಹಿತ್ ರೈನಾ ಕೂಡ ಚಿತ್ರದ ಭಾಗವಾಗಿದ್ದಾರೆ.
ಬರೋಬ್ಬರಿ ₹4,000 ಕೋಟಿ ಬಜೆಟ್!
'ರಾಮಾಯಣ' ಚಿತ್ರವು ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ ಬರೆಯುತ್ತಿದ್ದು, ಬರೋಬ್ಬರಿ ₹4,000 ಕೋಟಿ ಬೃಹತ್ ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ ಎಂದು ನಿರ್ಮಾಪಕ ನಮಿತ್ ಮಲ್ಹೋತ್ರಾ ಮಾಹಿತಿ ಹಂಚಿಕೊಂಡಿದ್ದರು.

