ನಾಪೋಕ್ಲು: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದಂತೆ ಇಲ್ಲಿಗೆ ಸಮೀಪದ ಚೆರಿಯ ಪರಂಬುವಿನ ಜನರಲ್ ತಿಮ್ಮಯ್ಯ ಕ್ರೀಡಾಂಗಣದ ಬಳಿ ಸಹಾಯವಾಣಿ ಕೇಂದ್ರ ಉದ್ಘಾಟಿಸಲಾಯಿತು.
ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಇಸ್ಮಾಯಿಲ್ ಮತ್ತು ವಲಯ ಅಧ್ಯಕ್ಷ ಕುಶಾಲಪ್ಪ ಮಾತನಾಡಿ, 'ನಾಪೋಕ್ಲು ಮತ್ತು ಬೇತು ಗ್ರಾಮದ ಮತದಾರರ ಅನುಕೂಲಕ್ಕಾಗಿ ಸಹಾಯವಾಣಿ ಕೇಂದ್ರ ತೆರೆಯಲಾಗಿದೆ.
ಮತದಾರರ ಪಟ್ಟಿ ಪರಿಶೀಲನೆಗೆ ಸಂಬಂಧಿಸಿದಂತೆ ಈ ವ್ಯಾಪ್ತಿಯ ಮತದಾರರು ಅಗತ್ಯವಿರುವ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದರು.
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯ ಆರಾಫಾತ್ ಪಿಎಂ, ವಲಯ ಕಾಂಗ್ರೆಸ್ ಸದಸ್ಯರಾದ ಕರೀಂ, ಸಾಧುಲಿ, ಹಾರಿಸ್, ಬಷೀರ್, ಬಿಎಲ್‌ಓ ರಝಾಕ್ ಉಪಸ್ಥಿತರಿದ್ದರು.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260705-51-1328332596

