Dailyhunt Logo
  • Light mode
    Follow system
    Dark mode
    • Play Story
    • App Story
ನಗರಸಭೆ ಮಾಜಿ ಅಧ್ಯಕ್ಷ ಎಂ.ಕೆ.ಸುರೇಶ್‌ ಕುಮಾರ್ ನಿಧನ

ನಗರಸಭೆ ಮಾಜಿ ಅಧ್ಯಕ್ಷ ಎಂ.ಕೆ.ಸುರೇಶ್‌ ಕುಮಾರ್ ನಿಧನ

ಶಿವಮೊಗ್ಗ: ನಗರಸಭೆ ಮಾಜಿ ಅಧ್ಯಕ್ಷ, ಕೋಟೆ ಮಾರಿಕಾಂಬಾ ಸಮಿತಿಯ ಉಪಾಧ್ಯಕ್ಷ, ಹಿಂದೂ ಮಹಾಸಭಾ ಮಂಡಳದ ಅಧ್ಯಕ್ಷ ಎಂ.ಕೆ.ಸುರೇಶ್‌ ಕುಮಾರ್ (65) ಶುಕ್ರವಾರ ನಿಧನರಾದರು.

ಇವರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ. ಪತ್ನಿ ಹಾಗೂ ಪುತ್ರಿ ವಿದೇಶದಲ್ಲಿದ್ದು, ಅವರು ವಾಪಸಾದ ನಂತರ ಅಂತ್ಯಕ್ರಿಯೆ ನೆರವೇರಿಸುವುದಾಗಿ ಕುಟುಂಬದ ಮೂಲಗಳು ತಿಳಿಸಿವೆ.

ಚಾಲುಕ್ಯ ಬಾರ್ ಆಯಂಡ್ ರೆಸ್ಟೋರೆಂಟ್‌ನ ಮಾಲೀಕರಾಗಿದ್ದು, ಚಾಲುಕ್ಯ ಸೂರಿ ಎಂದೇ ಪ್ರಸಿದ್ಧಿಯಾಗಿದ್ದರು. ಸಿಟಿ ಕೋ ಆಪರೇಟಿವ್ ಬ್ಯಾಂಕ್‌ನ ಅಧ್ಯಕ್ಷರಾಗಿ, ಕಾಂಗ್ರೆಸ್ ಮುಖಂಡರಾಗಿ ಗುರುತಿಸಿಕೊಂಡಿದ್ದರು. ಶುಕ್ರವಾರ ಬೆಳಿಗ್ಗೆ ಕೋಟೆ ಮಾರಿಕಾಂಬ ದೇವಿಗೆ ಸ್ವರ್ಣ ಮುಖ ಕವಚ ಹಾಗೂ ರಜತ ದ್ವಾರ ಸಮರ್ಪಣೆ ವೇಳೆ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260704-42-647891325

Dailyhunt
Disclaimer: This content has not been generated, created or edited by Dailyhunt. Publisher: Prajavani