Dailyhunt Logo
  • Light mode
    Follow system
    Dark mode
    • Play Story
    • App Story
ನರಗುಂದದಲ್ಲಿ ಬೈಕ್ ರ್‍ಯಾಲಿ ಮೂಲಕ ಮತದಾರರ ಜಾಗೃತಿ ಅಭಿಯಾನ

ನರಗುಂದದಲ್ಲಿ ಬೈಕ್ ರ್‍ಯಾಲಿ ಮೂಲಕ ಮತದಾರರ ಜಾಗೃತಿ ಅಭಿಯಾನ

ನರಗುಂದ: ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ತಾಲ್ಲೂಕು ಪಂಚಾಯಿತಿ, ತಾಲ್ಲೂಕು ಆಡಳಿತ,ತಾಲ್ಲೂಕು ಸ್ವೀಪ್‌ ಸಮಿತಿ ಹಾಗೂ ಪುರಸಭೆ ಆಶ್ರಯದಲ್ಲಿ ನಗರದಲ್ಲಿ ಬೃಹತ್ ಬೈಕ್ ರ್‍ಯಾಲಿ ಮೂಲಕ ಜಾಗೃತಿ ಅಭಿಯಾನ ಶುಕ್ರವಾರ ನಡೆಯಿತು.

ನಗರದ ಉಡುಚಾ ಪರಮೇಶ್ವರಿ ದೇವಸ್ಥಾನದಿಂದ ಆರಂಭವಾದ ಬೈಕ್ ರ್‍ಯಾಲಿಯು ದಂಡಾಪೂರ ರಸ್ತೆ, ಮುಖ್ಯ ಮಾರುಕಟ್ಟೆ ರಸ್ತೆ, ಗಾಂಧಿ ಚೌಕ್ ಹಾಗೂ ಬಸವೇಶ್ವರ ವೃತ್ತದ ಮೂಲಕ ಸಂಚರಿಸಿ, ವಿಜಯಪುರ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯ ಶಿವಾಜಿ ವೃತ್ತದಲ್ಲಿ ಮಾನವ ಸರಪಳಿ ರಚಿಸುವ ಮೂಲಕ ಸಮಾರೋಪಗೊಂಡಿತು.

ಈ ಸಂದರ್ಭದಲ್ಲಿ ಮಾತನಾಡಿದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರ್ ಚಿನಗುಂಡಿ, 'ಜೂನ್ 30ರಿಂದ ಜುಲೈ 29ರವರೆಗೆ ಎಸ್‌ಐಆರ್‌ ನಡೆಯುತ್ತಿದ್ದು, ಬಿಎಲ್‌ಒ ಮನೆ-ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಸಾರ್ವಜನಿಕರು ಬಿಎಲ್‌ಒಗಳು ಕೇಳುವ ಪ್ರಶ್ನೆಗಳಿಗೆ ಸರಿಯಾದ ಮಾಹಿತಿ ನೀಡಿ, ಅಗತ್ಯ ನಮೂನೆಗಳನ್ನು ಭರ್ತಿ ಮಾಡಿ ಸ್ವೀಕೃತಿ ಪಡೆಯುವ ಮೂಲಕ ಸಹಕರಿಸಬೇಕು' ಎಂದರು.

ಪುರಸಭೆ ಮುಖ್ಯಾಧಿಕಾರಿ ಸುಭಾಸ ಕುದಾನಪುರ ಮಾತನಾಡಿ 'ಶಾಲಾ-ಕಾಲೇಜುಗಳು, ಗ್ರಾಮೀಣ ಪ್ರದೇಶಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ವಿಶೇಷ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಮತದಾರರ ಪಟ್ಟಿಯಲ್ಲಿ ಅರ್ಹ ನಾಗರಿಕರನ್ನು ಸೇರ್ಪಡೆಗೊಳಿಸುವ ಉದ್ದೇಶದಿಂದ ವಿವಿಧ ಮಾಧ್ಯಮಗಳ ಮೂಲಕ ವ್ಯಾಪಕ ಅರಿವು ಮೂಡಿಸಲಾಗುತ್ತಿದೆ' ಎಂದರು.

ಸಂತೋಷಕುಮಾರ ಪಾಟೀಲ್, ಪಂಚಾಯತ್ ರಾಜ್ ಸಹಾಯಕ ನಿರ್ದೇಶಕಿ ಕೃಷ್ಣಮ್ಮ ಹಾದಿಮನಿ, ಹಿರಿಯ ಆರೋಗ್ಯ ನಿರೀಕ್ಷಕ ಸಂಗಮೇಶ ಬ್ಯಾಳಿ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಹಿರೇಮಠ ಸೇರಿದಂತೆ ಆರ್.ಡಿ.ಪಿ.ಆರ್. ಇಲಾಖೆ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪಶುಸಂಗೋಪನೆ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣಇಲಾಖೆ, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗ, ನರೇಗಾ, ಅಕ್ಷರದಾಸೋಹ ಹಾಗೂ ಎನ್.ಆರ್.ಎಲ್.ಎಂ. ಸಿಬ್ಬಂದಿ ಇದ್ದರು

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260704-23-147303902

Dailyhunt
Disclaimer: This content has not been generated, created or edited by Dailyhunt. Publisher: Prajavani