Dailyhunt
ನಟ ದರ್ಶನ್ ವಿರುದ್ಧ ಹಲ್ಲೆ ಆರೋಪ: ಸಂದೇಶ್ ಹೋಟೆಲ್‌ನಲ್ಲಿ ಪೊಲೀಸರಿಂದ ಪರಿಶೀಲನೆ

ನಟ ದರ್ಶನ್ ವಿರುದ್ಧ ಹಲ್ಲೆ ಆರೋಪ: ಸಂದೇಶ್ ಹೋಟೆಲ್‌ನಲ್ಲಿ ಪೊಲೀಸರಿಂದ ಪರಿಶೀಲನೆ

ಮೈಸೂರು: ಹೋಟೆಲ್ ಸಿಬ್ಬಂದಿ ಮೇಲೆ ನಟ ದರ್ಶನ್ ಅವರು ಹಲ್ಲೆ ನಡೆಸಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವರಾಜ ಉಪ ವಿಭಾಗದ ಎಸಿಪಿ ಶಶಿಧರ್ ನೇತೃತ್ವದಲ್ಲಿ ಪೊಲೀಸರು ಶುಕ್ರವಾರ ಸಂದೇಶ್ ದ ಪ್ರಿನ್ಸ್ ಹೋಟೆಲ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಲ್ಲೆಗೆ ಒಳಗಾದರು ಎನ್ನಲಾದ ಹೋಟೆಲ್ ಸಿಬ್ಬಂದಿ ಹಾಗೂ ಇತರರನ್ನು ವಿಚಾರಣೆ ನಡೆಸುತ್ತಿದ್ದಾರೆ.

ನಜರ್ ಬಾದ್ ಠಾಣೆಯ ಇನ್ ಸ್ಪೆಕ್ಟರ್ ಶ್ರೀಕಾಂತ್ ತಂಡದಲ್ಲಿ ಇದ್ದಾರೆ ಎಂದು ಮೂಲಗಳು ತಿಳಿಸಿವೆ.

ಹೋಟೆಲ್ ಸಿಬ್ಬಂದಿ ಮೇಲೆ ನಟನಿಂದ ಹಲ್ಲೆ ನಡೆದಿದೆ ಎಂದು ಆರೋಪಿಸಿದ್ದ ಪತ್ರಕರ್ತ ಇಂದ್ರಜಿತ್ ಲಂಕೆಶ್ ನಿನ್ನೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ತನಿಖೆಗೆ ಮನವಿ ಸಲ್ಲಿಸಿದ್ದರು.

ಬಳಿಕ, ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಗೃಹ ಸಚಿವರು, ಪ್ರಕರಣ ಕುರಿತಂತೆ ಪರಿಶೀಲನೆಗೆ ಸೂಚಿಸಿರುವುದಾಗಿ ಹೇಳಿದ್ದರು.

Dailyhunt
Disclaimer: This content has not been generated, created or edited by Dailyhunt. Publisher: Prajavani