ಕೋಲ್ಕತ್ತ: ಬಾಲಿವುಡ್ ಹಿರಿಯ ನಟ ಹಾಗೂ ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ಅನಾರೋಗ್ಯದ ಕಾರಣ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಣ್ಣ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಮಿಥುನ್ ಚಕ್ರವರ್ತಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಮಿಥುನ್ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಶೀಘ್ರದಲ್ಲೇ ಆಸ್ಪತ್ರೆಯಿಂದ ಬಿಡುಗಡೆಯಾಗುವ ನಿರೀಕ್ಷೆಯಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಶುಕ್ರವಾರ ಆಸ್ಪತ್ರೆಗೆ ಭೇಟಿ ನೀಡಿ ಮಿಥುನ್ ಆರೋಗ್ಯ ವಿಚಾರಿಸಿದ ಬಳಿಕ ಈ ವಿಷಯ ಬೆಳಕಿಗೆ ಬಂದಿದೆ.
ಆಸ್ಪತ್ರೆಗೆ ಭೇಟಿ ನೀಡಿದ ಸುವೇಂದು ಅಧಿಕಾರಿ, ಮಿಥುನ್ ಚಕ್ರವರ್ತಿ ಆರೋಗ್ಯ ವಿಚಾರಿಸಿದರು. ನಂತರ ಚಿಕಿತ್ಸೆ ನೀಡುತ್ತಿರುವ ವೈದ್ಯರ ತಂಡದೊಂದಿಗೂ ಚರ್ಚಿಸಿದರು.
'ಖ್ಯಾತ ನಟ ಹಾಗೂ ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ಅನಾರೋಗ್ಯದ ಹಿನ್ನೆಲೆಯಲ್ಲಿ ಕೋಲ್ಕತ್ತದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಅವರನ್ನು ಭೇಟಿಯಾಗಿ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡೆ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ' ಎಂದು ಸಾಮಾಜಿಕ ಮಾಧ್ಯಮ ಫೇಸ್‌ಬುಕ್‌ನಲ್ಲಿ ಸುವೇಂದು ಅಧಿಕಾರಿ ಬರೆದುಕೊಂಡಿದ್ದಾರೆ.
ಬಂಗಾಳ ಪಡೆಯಬಹುದಾದ ಅತ್ಯುತ್ತಮ CM ಸುವೇಂದು ಅಧಿಕಾರಿ: ಮಿಥುನ್ ಚಕ್ರವರ್ತಿ ಬಣ್ಣನೆThe Bengal Files | ಸತ್ಯ ಹೇಳಿದರೆ ಅಪಪ್ರಚಾರ ಎನ್ನುತ್ತಾರೆ: ಮಿಥುನ್ ಚಕ್ರವರ್ತಿ
