Dailyhunt Logo
  • Light mode
    Follow system
    Dark mode
    • Play Story
    • App Story
NEET Protest: ಆಸ್ಪತ್ರೆಯಲ್ಲಿ ಸೊನಮ್ ವಾಂಗ್ಚೂಕ್ ಭೇಟಿಯಾದ ಕೇಂದ್ರ ಸಚಿವರು

NEET Protest: ಆಸ್ಪತ್ರೆಯಲ್ಲಿ ಸೊನಮ್ ವಾಂಗ್ಚೂಕ್ ಭೇಟಿಯಾದ ಕೇಂದ್ರ ಸಚಿವರು

ನವದೆಹಲಿ: ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹೋರಾಟಗಾರ ಸೊನಮ್ ವಾಂಗ್ಚೂಕ್ ಅವರನ್ನು ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ, ಜಿತೇಂದ್ರ ಸಿಂಗ್ ಅವರು ಮಂಗಳವಾರ ತಡರಾತ್ರಿ ಭೇಟಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ ಸೊನಮ್ ವಾಂಗ್ಚೂಕ್ ಅವರನ್ನು, ದೆಹಲಿ ಹೈಕೋರ್ಟ್ ಆದೇಶದಂತೆ ಅಲ್ಲಿನ ಪೊಲೀಸರು ಸಫ್ದರ್‌ಜಂಗ್ ಆಸ್ಪತ್ರೆಗೆ ಬಲವಂತವಾಗಿ ಕರೆದೊಯ್ದಿದ್ದರು.

ಸಫ್ದರ್‌ಜಂಗ್ ಆಸ್ಪತ್ರೆಯಿಂದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲು ಅನುಮತಿ ಕೋರಿ ವಾಂಗ್ಚೂಕ್ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಅವರು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಸೊನಮ್ ವಾಂಗ್ಚೂಕ್ ಅವರನ್ನು ಮಂಗಳವಾರ(ಜುಲೈ 22) ರಾತ್ರಿ 7.30ರ ಸುಮಾರಿಗೆ ಬಿಗಿ ಭದ್ರತೆಯೊಂದಿಗೆ ಆಂಬ್ಯುಲೆನ್ಸ್ ಮೂಲಕ ಮೇದಾಂತ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದ್ದು, ಅವರಿಗೆ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ. ಅವರನ್ನು ಐಸಿಯು ಅಲ್ಲಿ ದಾಖಲಿಸಲಾಗಿದೆ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Prajavani